ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿವೆ.

ನಗರದ ಗಾಂಧಿವೃತ್ತದ ಬಳಿಯಿರುವ ಅಮಿತ್ ಸೂಪರ್ ಮಾರ್ಕೆಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಬಟ್ಟೆ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಎಂಬುವವರಿಗೆ ಸೇರಿದ ಈ ಅಂಗಡಿಯ ಎರಡನೇ ಮಹಡಿಗೂ ಬೆಂಕಿ ವ್ಯಾಪಿಸಿದ್ದು ಬಟ್ಟೆ, ಪೀಠೋಪಕರಣ ಸಂಪೂರ್ಣ ಕರಕಲಾಗಿವೆ. ಬೇಸಿಗೆ ಹಿನ್ನೆಲೆ ರಾತ್ರಿ ವೇಳೆ ಹಾಕಿದ್ದ ಎಸಿಯನ್ನ ಹಾಗೇ ಬಿಡಲಾಗಿತ್ತು. ಇದರಿಂದಲೇ ಶಾಟ್ ಸರ್ಕ್ಯೂಟ್ ಆಗಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply