RSS ಕಾರ್ಯಕರ್ತನ ಮೇಲೆ ಹಲ್ಲೆ: ಬಂಟ್ವಾಳ ಮತ್ತೆ ಉದ್ವಿಗ್ನ – ವಾಹನ ಸಂಚಾರ ಅಸ್ತವ್ಯಸ್ಥ

ಮಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮೇಲಿನ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ನಗರದ ಬಿ.ಸಿ.ರೋಡಿನಲ್ಲಿ ಸಂಘ ಪರಿವಾರ ಹಾಗು ಬಿಜೆಪಿ ಮುಖಂಡ ಮುಂದಾಳತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ ಸ್ಥಳದಲ್ಲಿದ್ದ ಸಾವಿರಕ್ಕೂ ಅಧಿಕ ಪೊಲೀಸರು ಅವರನ್ನು ಸುತ್ತುವರಿದರು.

ಮುಂದಾಳತ್ವ ವಹಿಸಿದ್ದ ಮುಖಂಡರಾದ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಸಂಘ ಪರಿವಾರದ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ವಾಹನ ಸಂಚಾರಕ್ಕೆ ತಡೆ: ಈ ನಡುವೆಯ ಬಿ.ಸಿ.ರೋಡ್ ರಸ್ತೆಯಾಗಿ ವಾಹನ ಸಂಚಾರವನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಮಂಗಳೂರಿನಿಂದ ಬಿ.ಸಿ.ರೋಡ್‍ನತ್ತ ತೆರಳುವ ವಾಹನಗಳನ್ನು ಫರಂಗಿಪೇಟೆಯಲ್ಲಿ ತಡೆ ಹಿಡಿಯಲಾಗಿದೆ. ಅದೇ ರೀತಿ ಕಲ್ಲಡ್ಕ ಕಡೆಯಿಂದ ಬರುವ ವಾಹನಗಳನ್ನು ಮೆಲ್ಕಾರ್‍ನಲ್ಲಿ ಪೊಲೀಸರು ತಡೆಹಿಡಿದಿದ್ದಾರೆ. ಈ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ ಪರ್ಯಾಯ ರಸ್ತೆಯ ಮೂಲಕ ಸಂಚರಿಸುವಂತೆ ಪೊಲೀಸರು ನಿರ್ದೇಶಿಸುತ್ತಿದ್ದಾರೆ.

ಪೊಲೀಸರ ಈ ಕ್ರಮದಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ವಾಹನಗಳ ಭಾರೀ ಸಾಲುಗಳು ಹೆದ್ದಾರಿಯಲ್ಲಿ ಕಂಡುಬರುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ.

ಹಲ್ಲೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಗೆ ಆರು ತಂಡ ರಚಿಸಲಾಗಿದ್ದು, ಹಲವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

 

Comments

Leave a Reply

Your email address will not be published. Required fields are marked *