ಶರತ್ ಹತ್ಯೆಗೆ ಪಾಲಿಟಿಕ್ಸ್ ಪಂಚ್- ಹಂತಕರಿಗಾಗಿ ಎನ್‍ಐಎ ತನಿಖೆಗೆ ಕುಟುಂಬ ಪಟ್ಟು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು 10 ದಿನಗಳೇ ಕಳೆದುಹೋಗಿದೆ. ಶರತ್ ಹಂತಕರ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದರೂ, ಶರತ್ ಹೆತ್ತವರು ಮಾತ್ರ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಶರತ್ ಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಮಾಡ್ತಿದ್ರೂ, ತನಿಖೆಯ ಹಾದಿ ಶರತ್ ಹೆತ್ತವರಲ್ಲಿ ಅಸಮಾಧಾನ ಸೃಷ್ಟಿಸಿದೆ. ಶರತ್ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಪೊಲೀಸರು ಇದೂವರೆಗೂ ಶರತ್ ಹೆತ್ತವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದಿಲ್ಲ. ಈ ಬಗ್ಗೆ ಪಬ್ಲಿಕ್ ಟಿವಿ ಬಳಿ ಅಳಲು ತೋಡಿಕೊಂಡ ಶರತ್ ತಂದೆ ತನಿಯಪ್ಪ, ರಾಜ್ಯ ಸರ್ಕಾರದ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಪ್ರಕರಣವನ್ನು ಕೇಂದ್ರಕ್ಕೆ ವರ್ಗಾಯಿಸಿ ಅಂತ ಒತ್ತಾಯಿಸುತ್ತಿದ್ದಾರೆ.

ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಬಿಜೆಪಿ ಕೂಡ ಒತ್ತಾಯಿಸಿದೆ. ಈ ಸಂಬಂಧ ರಾಜ್ಯ ಬಿಜೆಪಿ ಸಂಸದರು ಇಂದು ದೆಹಲಿಯಲ್ಲಿ ಪ್ರತಿಭಟನೆ ಕೂಡ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *