ರಾಯರ ದರ್ಶನ ಪಡೆದ ಆರ್‌ಎಸ್‌ಎಸ್‌ ಮುಖ್ಯಸ್ಥ

ರಾಯಚೂರು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನವನ್ನು ಪಡೆದುಕೊಂಡಿದ್ದಾರೆ.

ಮಂತ್ರಾಲಯದಲ್ಲಿ ಶನಿವಾರದಿಂದ ನಡೆಯಲಿರುವ ಆರ್‌ಎಸ್‌ಎಸ್‌ ಬೈಠಕ್ ಹಾಗೂ ಕಾರ್ಯಕಾರಣಿ ಸಭೆಗೆ ಆಗಮಿಸಿರುವ ಅವರು ಶುಕ್ರವಾರ ಬೆಳಗ್ಗೆ ರಾಯರ ದರ್ಶನ ಪಡೆದು, ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೇ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರರು ಮೋಹನ್ ಭಾಗವತ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರಮಟ್ಟದ ಸಭೆ ಮಂತ್ರಾಲಯದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಲಿದ್ದು, ಖುದ್ದು ಮೋಹನ ಭಾಗವತ್ ಅವರು ಟಿಟಿಡಿ ಪ್ರವಾಸಿ ಮಂದಿರದಲ್ಲಿ ನಡೆಯುವ ಸಭೆಯ ಸಿದ್ಧತೆಯನ್ನು ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಸುಜಯೀಂದ್ರ ವಿಶ್ರಾಂತಿ ಭವನದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.

ಆರ್‌ಎಸ್‌ಎಸ್‌ನ ವಿವಿಧ ಕ್ಷೇತ್ರಗಳ 150 ಕ್ಕೂ ಹೆಚ್ಚು ಜನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಂಜೆ ಮಂತ್ರಾಲಯಕ್ಕೆ ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *