ರಷ್ಯಾ ದಾಳಿಗೆ ಮೊದಲ ದಿನ 137 ಮಂದಿ ಸಾವು: ಉಕ್ರೇನಿಯನ್‌ ಅಧ್ಯಕ್ಷ

ಕೀವ್: ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಹತರಾಗಿದ್ದಾರೆ ಎಂದು ಉಕ್ರೇನಿಯನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೋದಲ್ಲಿ ಈ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಮೃತರನ್ನು ಹೀರೋಗಳು ಎಂದು ಕರೆದಿದ್ದಾರೆ. ರಷ್ಯಾ ದಾಳಿ ಪರಿಣಾಮವಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

ಉಕ್ರೇನ್‌ ಮಿಲಿಟರಿಯನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುವುದು. ಅಲ್ಲಿನ ಜನತೆಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ರಷ್ಯಾ ಹೇಳಿತ್ತು. ಆದರೆ ದೇಶದ ಪ್ರಜೆಗಳ ನೆಲೆಗಳು ಸಹ ದಾಳಿಯಿಂದ ತತ್ತರಿಸಿ ಹೋಗಿವೆ ಎಂದು ಉಕ್ರೇನಿಯನ್‌ ಅಧ್ಯಕ್ಷರು ಗಂಭೀರ ಆರೋಪ ಮಾಡಿದ್ದಾರೆ.

ಅವರು ಜನರನ್ನು ಕೊಲ್ಲುತ್ತಿದ್ದಾರೆ. ಶಾಂತಿಯಿಂದ ಕೂಡಿದ್ದ ನಗರಗಳನ್ನು ಮಿಲಿಟರಿ ಗುರಿಗಳಾಗಿ ಪರಿವರ್ತಿಸುತ್ತಿದ್ದಾರೆ. ಇದು ಮೋಸ, ಕ್ಷಮಿಸಲು ಅರ್ಹವಲ್ಲದ ನಡೆ ಎಂದು ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ಗೆ ಆರ್ಥಿಕ ನೆರವು ನೀಡಲು ಸಿದ್ಧ: ವಿಶ್ವ ಬ್ಯಾಂಕ್‌

ಒಡೆಸ್ಸಾ ಪ್ರದೇಶದ ಮಿನಿ ದ್ವೀಪದಲ್ಲಿ ಎಲ್ಲಾ ಗಡಿ ಕಾವಲುಗಾರರನ್ನು ಗುರುವಾರ ಕೊಲ್ಲಲಾಯಿತು. ದ್ವೀಪವನ್ನು ರಷ್ಯನ್ನರು ವಶಪಡಿಸಿಕೊಂಡಿದ್ದಾರೆ ಎಂದು ಉಕ್ರೇನ್‌ನ ಗಡಿ ಸಿಬ್ಬಂದಿ ವರದಿ ಮಾಡಿದ್ದಾರೆ ಎಂದು ವೊಲೊಡಿಮಿರ್‌ ತಿಳಿಸಿದ್ದಾರೆ. ಇದನ್ನೂ ಓದಿ:  Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?

Comments

Leave a Reply

Your email address will not be published. Required fields are marked *