ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

ನವದೆಹಲಿ: ಉಕ್ರೇನ್‌ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತ ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ವಿಚಾರಣೆ ನಡೆಸುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬಂದಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

SUPREME COURT

ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ವ್ಯಕ್ತವಾಗಿರುವ ಪ್ರಶ್ನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಸಿಜೆಐ, ಯುದ್ಧವನ್ನು ನಿಲ್ಲಿಸುವಂತೆ ನಾನು ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಗೆ ಹೇಳಬಹುದೇ ಎಂದು ಪ್ರಶ್ನಿಸಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋವೊಂದನ್ನು ನೋಡಿದೆ. ಸಿಜೆಐ ಏನು ಮಾಡುತ್ತಿದ್ದಾರೆ ಎಂದು ಅದರಲ್ಲಿ ಪ್ರಶ್ನಿಸಿದ್ದಾರೆ. ಯುದ್ಧವನ್ನು ನಿಲ್ಲಿಸಿ ಅಂತ ಪುಟಿನ್‌ ಅವರಿಗೆ ನಾನು ನಿರ್ದೇಶನ ನೀಡಬಹುದೇ ಎಂದು ಸಿಜೆಐ ಎನ್‌.ವಿ.ರಮಣ ಕೇಳಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

ಉಕ್ರೇನ್ ಗಡಿಯಲ್ಲಿ ಸಿಲುಕಿರುವ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಮನವಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಈ ಹೇಳಿಕೆ ನೀಡಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮೇಲೆ ನಮಗೆ ಸಹಾನುಭೂತಿ ಇದೆ. ಅವರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ. ನಾವು ಏನು ಮಾಡಬಹುದು ಎಂದು ಅಟಾರ್ನಿ ಜನರಲ್‌ ಅವರನ್ನು ಕೇಳಿದ್ದೇವೆ ಎಂದು ಸಿಜೆಐ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

ಉಕ್ರೇನ್‌ನ ಪಶ್ಚಿಮ ಭಾಗದ ನೆರೆರಾಷ್ಟ್ರಗಳಾದ ರೊಮೇನಿಯಾ, ಹಂಗೇರಿ, ಪೋಲ್ಯಾಂಡ್‌ ಮೂಲಕ ಭಾರತ ತನ್ನ ಪ್ರಜೆಗಳನ್ನು ವಿಶೇಷ ವಿಮಾನಗಳ ಮೂಲಕ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುತ್ತಿದೆ. ಫೆ.24ರಿಂದ ಉಕ್ರೇನ್‌ ವಾಯುಮಾರ್ಗ ಸ್ಥಗಿತಗೊಂಡಿರುವ ಕಾರಣ ಈ ಕ್ರಮವಹಿಸಲಾಗಿದೆ.

Comments

Leave a Reply

Your email address will not be published. Required fields are marked *