ಮೈಸೂರು: ಪರಿಹಾರ ಕಾಮಗಾರಿಗೆ 283 ಕೋಟಿ ಅನುದಾನಕ್ಕೆ ಸಿಎಂಗೆ ಸಚಿವ ಸೋಮಶೇಖರ್ ಮನವಿ

ಮೈಸೂರು: ಜಿಲ್ಲೆಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪ್ರಸ್ತಾವನೆಯಂತೆ 283 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಮನವಿ ಸಲ್ಲಿಸಿದ್ದಾರೆ.

ನಗರ ಮತ್ತು ಜಿಲ್ಲಾದ್ಯಂತ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಸಂಬಂಧ ಪರಿಹಾರ ಕಾಮಗಾರಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗಳಿಗೆ 152.5 ಕೋಟಿ ರೂ. ಹಾಗೂ ಮೈಸೂರು ನಗರ ಒಳಚರಂಡಿ ಸುಧಾರಣೆ ಸಂಬಂಧ 35 ಕಾಮಗಾರಿಗೆ 130.85 ಕೋಟಿ ರೂ. ಸೇರಿದಂತೆ ಒಟ್ಟು 283.35 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಿ, ತುರ್ತಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮವಹಿಸುವಂತೆ ಕೋರಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

chamundi hill landslide

ಮೈಸೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಕುರಿತು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನವೆಂಬರ್ 1ರಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿ, ಕೂಡಲೇ ತುರ್ತು ಪರಿಹಾರ ಕಾಮಗಾರಿಗೆ ಬೇಕಾದ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಇದನ್ನೂ ಓದಿ: ಮುಂಬರುವ ಚುನಾವಣೆಗೆ ಪಕ್ಷ ಬಲಪಡಿಸುವುದಕ್ಕೆ ಜನ ಸ್ವರಾಜ್ ಯಾತ್ರೆ: ಬಿ.ಸಿ ಪಾಟೀಲ್

basavaraj bommai

ಈ ಹಿನ್ನೆಲೆಯಲ್ಲಿ ಮಳೆ ಹಾನಿ ಸಂಬಂಧ ತುರ್ತಾಗಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗೆ 152.50 ಕೋಟಿಗೆ ಹಾಗೂ ಮೈಸೂರು ನಗರದಲ್ಲಿ ಒಳಚರಂಡಿ ತ್ಯಾಜ್ಯ ನೀರು ಮಳೆ ನೀರು ಚರಂಡಿಯಲ್ಲಿ ಹರಿಯುತ್ತಿರುವುದನ್ನು ತಪ್ಪಿಸಿ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಗೆ ಸಾಗಿಸಲು ಕೈಗೊಳ್ಳಬೇಕಾಗಿರುವ 35 ಕಾಮಗಾರಿಗೆ 130.35 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ.

ಈ ಕಾಮಗಾರಿಗಳನ್ನು ತೆಗೆದುಕೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರಿಗೆ ಕೋರಿದ್ದಾರೆ.

Comments

Leave a Reply

Your email address will not be published. Required fields are marked *