ನನಗೆ ಅವರ ಹೆಸರು ಹೇಳೋಕೆ ಬೇಜಾರಾಗುತ್ತೆ – ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ

– ವಿಧಾನಭೆಯಲ್ಲಿ ಸ್ವಿಮ್ಮಿಂಗ್ ಪೂಲ್ ವಿಚಾರ ಪ್ರಸ್ತಾಪ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಶಾಸಕ ಸಾ.ರಾ.ಮಹೇಶ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿ, ನನಗೆ ಅವರ ಹೆಸರು ಹೇಳಲು ಬೇಸರವಾಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ವಿಧಾನಸಭಾ ಕಲಾಪದ ವೇಳೆ ಬ್ಯಾಗ್ ಖರೀದಿ ವಿಚಾರ ಪ್ರಸ್ತಾಪ ಮಾಡಿದಾಗ ಹೆಸರು ಹೇಳದೆ ಹಿಂದಿನ ಮೈಸೂರು ಜಿಲ್ಲಾಧಿಕಾರಿ ಎಂದು ಸಾ.ರಾ.ಮಹೇಶ್ ಹೇಳಿದಾಗ, ಹೆಸರು ಹೇಳಿ ಎಂದು ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ. ಆಗ ಸಾ.ರಾ.ಮಹೇಶ್ ಅವರು ನನಗೆ ಅವರ ಹೆಸರು ಹೇಳೋದಕ್ಕೆ ಬೇಜಾರ್ ಆಗುತ್ತದೆ ಎಂದು ಪರೋಕ್ಷವಾಗಿ ರೋಹಿಣಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಇದನ್ನೂ ಓದಿ:  ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

ಹಿಂದಿನ ಮೈಸೂರು ಜಿಲ್ಲಾಧಿಕಾರಿ ಸ್ವಿಮ್ಮಿಂಗ್ ಪೂಲ್ ವಿಚಾರ ಸದನಲ್ಲಿ ಪ್ರಸಾಪವಾಗಿದೆ. ಸ್ವಿಮ್ಮಿಂಗ್ ಪೂಲ್ ಕಟ್ಟಲು 30 ಲಕ್ಷ ರೂಪಾಯಿ ಏಕೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸ್ವಿಮ್ಮಿಂಗ್ ಪೂಲ್ ಫೋಟೋ ಪ್ರದರ್ಶನ ಮಾಡಿ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಹಕ್ಕುಚ್ಯುತಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ:  ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

ಕ್ರೀಯಾ ಯೋಜನೆಯಲ್ಲಿ ಬ್ಯಾಗ್ ಖರೀದಿ ಮಾಡಿದ್ದಾರೆ. ಮೈಸೂರು ಪುರಸಭೆ, ತಾಲೂಕು ಪಂಚಾಯ್ತಿ ಜಿಲ್ಲಾ ಪಂಚಾಯ್ತಿ ಹಕ್ಕು ಮೊಟಕುಗೊಳಿಸಿ ಜಿಲ್ಲಾಧಿಕಾರಿ ನೇರವಾಗಿ ಖರೀದಿ ಮಾಡಿದ್ದಾರೆ. ಸಾ.ರಾ.ಮಹೇಶ್ ಒತ್ತಡ ತಂದು ವರ್ಗಾವಣೆ ಮಾಡಿದ್ದಾರೆ ಅಂತಾ ಯಾರದೋ ಕಾಲು ಕಟ್ಟಿ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಿದ್ರು, ಬಂದು ಮಾಡಿದ್ದೆಲ್ಲ ಅನಾಚಾರದ ಕೆಲಸವಾಗಿದೆ. ಮೂವತ್ತು ಲಕ್ಷಕ್ಕೆ ಸ್ವಿಮ್ಮಿಂಗ್ ಪೂಲ್ ಮಾಡಿಸಿಕೊಂಡ್ರು, ಹದಿನೈದು ಲಕ್ಷಕ್ಕೆ ಕಚೇರಿ ನವೀಕರಣ ಮಾಡಿಸಿಕೊಂಡರು ಎಂದು ಹೇಳುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಹೇಶ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜೂಜಾಟದ ಬಿಗಿ ಕ್ರಮಕ್ಕೆ, ಪೊಲೀಸ್ ಕಾಯ್ದೆ ತಿದ್ದುಪಡಿ ತರುತ್ತಿದ್ದೇವೆ: ಬೊಮ್ಮಾಯಿ

ಆರೋಪದ ವೇಳೆ ನ್ಯೂಸ್ ಪೇಪರ್ ಕಟ್ಟಿಂಗ್ಸ್ ತೋರಿಸಿ ರೋಹಿಣಿ ಸಿಂಧೂರಿ ಎಂದ ಸಾ.ರಾ.ಮಹೇಶ್, ನಾನು ಹೆಸರು ಹೇಳಲಿಲ್ಲ, ಆದರೆ ಪೇಪರ್‌ನಲ್ಲಿ  ಇರೋದನ್ನ ಹೇಳಿದ್ದೇನೆ ಅನ್ನೋ ಮೂಲಕ ಹೆಸರೇಳದೆ ಜಾರಿಕೊಂಡರು.

Comments

Leave a Reply

Your email address will not be published. Required fields are marked *