ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದ ಆದೇಶವನ್ನು ಪ್ರಶ್ನಿಸಿ, ಒಟ್ಟು 49 ಮರು ಪರಿಶೀಲನಾ ಅರ್ಜಿಗಳು ಸವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ಜನವರಿ 22 ರಿಂದ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.

ಈ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಹಾಗೂ ನ್ಯಾಯಮೂರ್ತಿಗಳಾದ ಎನ್. ನಾರಿಮನ್, ಎ.ಎಂ.ಖನ್ವೀರ್ ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ಪಂಚ ಸದಸ್ಯ ಪೀಠ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಈ ಮೊದಲು ಸುಪ್ರೀ ಕೋರ್ಟ್ ಹೇಳಿದ್ದೇನು?
ಸೆಪ್ಟೆಂಬರ್ 28 ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ 4:1 ರಂತೆ ಶಬರಿಮಲೆ ದೇಗುಲಕ್ಕೆ ಎಲ್ಲಾ ಮಹಿಳೆಯ ಪ್ರವೇಶಕ್ಕೆ ಅಸ್ತು ಎಂದು ತೀರ್ಪು ಪ್ರಕಟಿಸಿತ್ತು.

ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ, ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾಗಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಮಹಿಳೆಯರಿಗೆ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯು ಉಗ್ರ ಸ್ವರೂಪ ಪಡೆದುಕೊಂಡು ಲಾಠಿ ಚಾರ್ಜ್ ಗಳು ಆಗಿದ್ದವು. ಇಷ್ಟಾದರೂ ಭಕ್ತರು ಮಾತ್ರ ಮಹಿಳೆಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲೇ ಇಲ್ಲ. ಅಲ್ಲದೇ ಇದನ್ನು ವಿರೋಧಿಸಿ ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದವು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *