ಕಪ್ಪು ಮುಸುಕು ಧರಿಸಿ ಸರ್ಕಾರದ ವಿರುದ್ಧ ಸಫಾಯಿ ಕರ್ಮಚಾರಿಗಳ ಆಕ್ರೋಶ

ರಾಯಚೂರು: ಸಫಾಯಿ ಕರ್ಮಚಾರಿಗಳಿಗೆ ಅಂಬೇಡ್ಕರ್ ಸಫಾಯಿ ಕರ್ಮಚಾರಿ ನಿಗಮದಿಂದಲೇ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ಬಾಬು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ಮುಖಕ್ಕೆ ಕಪ್ಪು ಮುಸುಕು ಧರಿಸಿ ಮಾಧ್ಯಮಗೋಷ್ಠಿ ನಡೆಸಿದ ಭಾಸ್ಕರ್ ಬಾಬು, ನಿಸ್ಸಾಹಾಯಕ ಸ್ಥಿತಿಯಲ್ಲಿರುವ ಕಾರ್ಮಿಕರಿಗೆ ನಿಗಮದಲ್ಲಿ ಕೂತಿರುವ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಯೋಜನೆಗಳನ್ನ ತಲುಪಿಸುತ್ತಿಲ್ಲ. ಅನ್ಯ ಜನಾಂಗದವರು ನಿಗಮಕ್ಕೆ ನೇಮಕಗೊಂಡು ಕೇವಲ ಪ್ರಚಾರಕ್ಕಾಗಿ ಪ್ರವಾಸ ಕೈಗೊಂಡು ಅನುದಾನ ವ್ಯಯಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:  ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

ಕಾರ್ಮಿಕರ ಸಮಸ್ಯೆಗಳ ಕುರಿತು ಹಲವು ಬಾರಿ ಲಿಖಿತ ದೂರು ನೀಡಿದರೂ ಜಾಣಕಿವುಡುತನ ಪ್ರದರ್ಶಿಸುತ್ತಿದ್ದಾರೆ. ಮ್ಯಾನ್ ಹೋಲ್ ಸ್ಕ್ಯಾವೆಂಜರ್ ಗಳ ಬಗ್ಗೆ ಮಾನವೀಯತೆ ದೃಷ್ಟಿಯಿಂದ ಸರ್ಕಾರ ಹಾಗೂ ಆಯೋಗ ಯೋಚಿಸಬೇಕು ಎಂದು ಮನವಿ ಮಾಡಿದರು.

Comments

Leave a Reply

Your email address will not be published. Required fields are marked *