ಸೈನಾ ಮದುವೆ ಆಮಂತ್ರಣ ಪತ್ರಿಕೆ ಬಹಿರಂಗ

ಹೈದರಾಬಾದ್: ಬ್ಯಾಡ್ಮಿಂಟನ್ ತಾರಾ ಜೋಡಿ ಸೈನಾ ನೆಹ್ವಾಲ್ ಮತ್ತು ಪಾರುಪಲ್ಲಿ ಕಶ್ಯಪ್ ಮದುವೆಯ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 16ರಂದು ಜೋಡಿ ವೈವಾಹಿಕ ಬಂಧನಕ್ಕೆ ಒಳಗಾಗಲಿದ್ದಾರೆ.

ಕಳೆದ 10 ವರ್ಷಗಳಿಂದ ಇಬ್ಬರ ನಡುವೆ ಪರಿಚಯವಿದ್ದು, ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇವೆ. 2007-08 ರ ಬಳಿಕ ನಾವಿಬ್ಬರೂ ಒಟ್ಟಿಗೆ ಬ್ಯಾಡ್ಮಿಂಟನ್ ಟೂರ್ನಿ ಜರ್ನಿ ಆರಂಭಿಸಿದ್ದು, ಹಲವು ಟೂರ್ನಿಗಳಲ್ಲಿ ಒಟ್ಟಿಗೆ ಭಾಗವಹಿಸಿದ್ದೇವೆ. ತರಬೇತಿ ಪಡೆದಿದ್ದೇವೆ. ಬೇರೊಬ್ಬರೊಂದಿಗೆ ಉತ್ತಮ ಬಾಂಧವ್ಯ ರೂಪಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಆದರೆ ಇಬ್ಬರು ಬಹುಬೇಗ ಆತ್ಮೀಯಾರಗಿದ್ದೇವೆ ಎಂದು ಹೇಳಿದ್ದಾರೆ.

ಸೈನಾ, ಕಶ್ಯಪ್ ಮದುವೆ ಕುರಿತು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ಈ ಕುರಿತು ಇಬ್ಬರು ಅಧಿಕೃತ ಹೇಳಿಕೆಯನ್ನು ಎಲ್ಲೂ ನೀಡಿರಲಿಲ್ಲ. ಸೈನಾ ಹಾಗೂ ಕಶ್ಯಪ್ ಬ್ಯಾಡ್ಮಿಂಟನ್ ಕೋಚ್ ಗೋಪಿಚಂದ್ ಅವರ ಗರಡಿಯಲ್ಲಿ ಪಳಗಿದ ಆಟಗಾರರಾಗಿದ್ದಾರೆ. ಉಳಿದಂತೆ ಕುಟುಂಬಗಳ ಹಿರಿಯರು ಈಗಾಗಲೇ ಮದುವೆ ಕುರಿತು ಮಾತುಕತೆ ನಡೆಸಿದ್ದಾರೆ. ಅಲ್ಲದೇ ವಿವಾಹ ಕಾರ್ಯಕ್ರಮದ ಸಿದ್ಧತೆಗಳನ್ನು ಆರಂಭಿಸಿದ್ದು, ಮದುವೆಯ ಸಮಾರಂಭಕ್ಕೆ ಕುಟುಂಬದ ಸದಸ್ಯರು ಹಾಗೂ ಆಪ್ತ ವಲಯದ ಕೆಲವೇ ಮಂದಿಗೆ ಆಹ್ವಾನ ನೀಡಲಾಗುತ್ತದೆ ಎನ್ನಲಾಗಿದೆ.

ಇವರಿಬ್ಬರ ಮದುವೆ ಡಿಸೆಂಬರ್ 16ರ ಭಾನುವಾರದಂದು ನಡೆಯಲಿದ್ದು, ಸಂಜೆ ಆರತಕ್ಷತೆ ಹೈದರಾಬಾದ್ ನ ಮಾಧಪುರದಲ್ಲಿರುವ ನೊವೊಟೆಲ್ ಹೊಟೇಲ್ ನಲ್ಲಿ ನಡೆಯಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *