ಉಪ್ಪಿನ ಕಾರ್ಖಾನೆಯಲ್ಲಿ ಗೋಡೆ ಕುಸಿತ- 12 ಕಾರ್ಮಿಕರ ದುರ್ಮರಣ

ಗಾಂಧಿನಗರ: ಉಪ್ಪು ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡ ಘಟನೆ ಗುಜರಾತ್‍ನ ಮೊರ್ಬಿ ಹಲ್ವಾಡ್ ಜಿಐಡಿಸಿಯಲ್ಲಿ ನಡೆದಿದೆ.

ಸ್ಥಳೀಯ ಆಡಳಿತವು ಜೆಸಿಬಿ ಬಳಸಿ ಮೃತದೇಹಗಳನ್ನು ಹೊರತೆಗೆದಿದೆ. ಜೊತೆಗೆ ಗೊಡೆ ಕುಸಿತದಲ್ಲಿ ಸಿಲುಕಿದವರನ್ನು ರಕ್ಷಿಸಿದ್ದಾರೆ. ಗೋಣಿ ಚೀಲಗಳಲ್ಲಿ ಉಪ್ಪು ತುಂಬುವ ಪ್ರಕ್ರಿಯೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಏಕಾಏಕಿ ಗೋಡೆ ಕುಸಿದಿದ್ದು, 20ರಿಂದ 30 ಕಾರ್ಮಿಕರು ಸಮಾಧಿಯಾಗುವ ಭೀತಿ ಎದುರಾಗಿದೆ. ಅವರಲ್ಲಿ 12 ಸಾವು ದೃಢಪಟ್ಟಿದೆ.

crime

ಕಾರ್ಮಿಕರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮುಂದಿನ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗುಜರಾತ್ ಸರ್ಕಾರ ಕೂಡ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ಕುತುಬ್ ಮಿನಾರ್ ನಿರ್ಮಿಸಿದ್ದು ಕುತುಬ್ ಅಲ್-ದಿನ್ ಐಬಕ್ ಅಲ್ಲ

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯವಿದ್ರಾವಕವಾಗಿದೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಎಲ್ಲಾ ರೀತಿಯ ನೆರವು ನೀಡುತ್ತಿದ್ದಾರೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ

Comments

Leave a Reply

Your email address will not be published. Required fields are marked *