ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ

ಹುಬ್ಬಳ್ಳಿ ಕಾಲೇಜುವೊಂದರಲ್ಲಿ ನಡೆದ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇದೀಗ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಪ್ರತಿಕ್ರಿಯೆ ನೀಡಿದ್ದಾರೆ. ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಪರ ಧ್ರುವ ಧ್ವನಿಯೆತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಸೀರಿಯಲ್‌ಗೆ ತಾರಕ್ ಪೊನ್ನಪ್ಪ ಗುಡ್ ಬೈ


ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಕ್ರೂರಿಗೆ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏ.18ರಂದು ಹುಬ್ಬಳ್ಳಿ- ಧಾರಾವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅವರ ಪುತ್ರಿ ಹತ್ಯೆ ನಡೆದಿತ್ತು. ನೇಹಾ ಹತ್ಯೆಗೈದ ಆರೋಪಿ ಫಯಾಜ್ ಬಂಧನವೂ ಆಗಿದೆ. ನಗರದ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.