ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದ ನಟಿ ಪೂಜಾ ಗಾಂಧಿ!

ಬೆಂಗಳೂರು: ಸ್ಯಾಂಡಲ್‍ವುಡ್ ಮಳೆ ಹುಡುಗಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

ಹೌದು. ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ನಟಿ ಪೂಜಾ ಗಾಂಧಿ ಹಾಗೂ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರು. ಕಳೆದ 2016ರ ಏಪ್ರಿಲ್‍ನಿಂದ ಮಾರ್ಚ್ 2017ರವರೆಗೆ ಬರೋಬ್ಬರಿ 1 ವರ್ಷ ರೂಂ ಬುಕ್ ಮಾಡಿದ್ದರು.

ಬಿಜೆಪಿ ಮುಖಂಡನ ಜೊತೆ ರೂಂ ಬುಕ್ ಮಾಡಿ ಆತಿಥ್ಯ ಸ್ವೀಕರಿಸಿದ್ದ ನಟಿ, 26 ಲಕ್ಷ ರೂಪಾಯಿ ಬಿಲ್ ಕಟ್ಟದೆ ಹೋಟೆಲಿಗೆ ಸತಾಯಿಸುತ್ತಿದ್ದರು. ಅಲ್ಲದೆ ಇದರಲ್ಲಿ 22 ಲಕ್ಷ ರೂಪಾಯಿ ಪಾವತಿಸಿ 3.53 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋಟೆಲ್ ಆಡಳಿತ ಮಂಡಳಿ ಬೆಂಗಳೂರಿನ ಹೈ ಗ್ರೌಂಡ್ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್(ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ. ಒಟ್ಟಿನಲ್ಲಿ ಓರ್ವ ಸ್ಟಾರ್ ನಟಿಯ ಬಳಿ ಬಿಲ್ ಕಟ್ಟಲೂ ಹಣ ಇರಲಿಲ್ಲವೇ? ನಾಲ್ಕೂವರೆ ಲಕ್ಷ ಹಣ ಕೊಡದೇ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.

Comments

Leave a Reply

Your email address will not be published. Required fields are marked *