ಮಡಿಕೇರಿ: ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಪೊನ್ನಂಪೇಟೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಅರ್ಧ ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ಬಾರಿ ತೀರ್ಪನ್ನು ಕಾಯ್ದಿರಿಸಿದ್ದರು. ನ್ಯಾಯಾಧೀಶರಾದ ಮೋಹನ್ ಗೌಡ, ಬಂಧನಕ್ಕೊಳಗಾಗಿದ್ದ ಸಂತೋಷ್ ತಮ್ಮಯ್ಯರಿಗೆ ಷರತ್ತು ಬದ್ಧ ಜಾಮೀನು ನೀಡಿ ಅದೇಶಿಸಿದ್ದಾರೆ.
ಏನಿದು ಪ್ರಕರಣ?
ಪ್ರವಾದಿ ಹಾಗೂ ಟಿಪ್ಪು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟ ಆರೋಪದ ಮೇಲೆ ಪತ್ರಕರ್ತ ಸಂತೋಷ ತಮ್ಮಯ್ಯ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜವನಯ್ಯನ ಪಾಳ್ಯದಲ್ಲಿನ ಮಾವನ ಮನೆಯಲ್ಲಿ ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಕೊಡಗಿನ ಗೋಣಿಕೊಪ್ಪ ಪೊಲೀಸರು ಬಂಧಿಸಿ, ಇವತ್ತು ಕೋರ್ಟ್‍ಗೆ ಹಾಜರು ಪಡಿಸಿದ್ದರು.

ನವೆಂಬರ್ 5ರಂದು ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ “ಟಿಪ್ಪು ಕರಾಳ ಮುಖಗಳು” ಅನ್ನೋ ವಿಚಾರ ಸಂಕೀರಣದಲ್ಲಿ ಸಂತೋಷ್ ತಮ್ಮಯ್ಯ ಮಾತನಾಡಿ, ಪ್ರವಾದಿಗಳನ್ನು ಅವಹೇಳನ ಮಾಡಿದ್ದರು ಅಂತ ಕೊಡಗಿನ ಸಿದ್ದಾಪುರದ ಆಸಿಫ್ ಎಂಬಾತ ದೂರು ನೀಡಿದ್ದರು. ಇದರ ಮೇರೆಗೆ ಎಫ್‍ಐಆರ್ ದಾಖಲಿಸಿದ ಪೊಲೀಸರು ಸಂತೋಷ್ ತಮ್ಮಯ್ಯನನ್ನು ಬಂಧಿಸಿದ್ದರು.
ಸಂತೋಷ್ ಬಂಧನಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡೋವರ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲ್ಲ. ಆದ್ರೆ, ಟಿಪ್ಪು, ಪ್ರವಾದಿ ಅಂತ ಮಾತನಾಡಿದ್ರೆ ಹಿಂದೂಗಳನ್ನು ಹತ್ತಿಕ್ಕುವ ಹುನ್ನಾರ ಮಾಡ್ತಾರೆ ಅಂತ ಹಿಂದೂಪರ ಸಂಘಟನೆಗಳು ಇವತ್ತು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಾಳೆ ಮಧ್ಯಾಹ್ನ 1 ಗಂಟೆ ಬಂದ್‍ಗೆ ಕರೆ ನೀಡಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ಬಾಚರಣಿಯಂಡ ಪಿ.ಅಪ್ಪಣ್ಣ, ಅಡ್ಡಂಡ ಕಾರ್ಯಪ್ಪ, ಸುಧಾಕರ್ ಹೊಸಳ್ಳಿ, ರಾಬರ್ಟ್ ರೊಜಾರಿಯೋ ಎಂಬವರಿಗೆ ಬಂಧನ ಭೀತಿ ಎದುರಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply