ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾಗಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ, ಎಚ್.ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಿರುತ್ತಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ನಡೆಸುವುದು ಅಷ್ಟು ಸುಲಭವಲ್ಲ. ಆದ್ರೆ ಈ ಹಿಂದೆ ಸಮ್ಮಿಶ್ರ ಸರ್ಕಾರ ನಡೆಸಿದ ಅನುಭವ ಸಿಎಂ ಕುಮಾರಸ್ವಾಮಿಗೆ ಇದೆ. ಸಣ್ಣಪುಟ್ಟ ಘಟನೆಯಿಂದ ಮನಸ್ಸಿಗೆ ನೋವಾಗಿರಬಹುದು, ಅದನ್ನೆಲ್ಲ ಮೀರಿ ಸಿಎಂ ಕುಮಾರಸ್ವಾಮಿಯವರು ಸಮ್ಮಿಶ್ರ ಸರ್ಕಾರ ನಿಭಾಯಿಸುತ್ತಾರೆ. ಕಾಂಗ್ರೆಸ್ ಶಾಸಕರು ಅವರ ವ್ಯಯಕ್ತಿಕ ಅಭಿಪ್ರಾಯ ಹೊರಹಾಕಿದ್ದಾರೆ ಅಷ್ಟೇ. ಕುಮಾರಸ್ವಾಮಿ ಅವರು ಇಂತಹ ಪರಿಸ್ಥಿತಿಯನ್ನು ನಿಭಾಯಿಸಿಕೊಂಡು ಉತ್ತಮವಾಗಿ ಸರ್ಕಾರ ನಡೆಸುತ್ತಾರೆ ಎಂದು ಸಿಎಂ ಪರ ಹೇಳಿಕೆ ನೀಡಿದರು. ಇದನ್ನೂ ಓದಿ: ಕೈ ಶಾಸಕರು ಸಿದ್ದರಾಮಯ್ಯನವರನ್ನು ಹೊಗಳಿದರೆ ತಪ್ಪೇನು: ಪರಮೇಶ್ವರ್ ಪ್ರಶ್ನೆ

ಮೈತ್ರಿ ಸರ್ಕಾರದಲ್ಲಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ಸಮನ್ವಯ ಸಮಿತಿ ಇದೆ, ಅಲ್ಲಿ ನಾವು ಚರ್ಚೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೇವೆ. ಇಷ್ಟೇ ಅಲ್ಲದೆ ಜಂಟಿಯಾಗಿ ಎರಡು ಪಕ್ಷಗಳ ಸಿಎಲ್‍ಪಿ ಸಭೆ ನಡೆಸಲು ಅವಕಾಶವಿದೆ. ಕೆಲವೊಮ್ಮೆ ಮನಸ್ಸಿಗೆ ನೋವಾದ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಬರುತ್ತವೆ. ಶಾಸಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಆದ್ರೆ ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ಯಾವುದೇ ಚರ್ಚೆಯಾಗಿಲ್ಲ ಎಂದು ಪಕ್ಷದವರ ಹೇಳಿಕೆಯನ್ನ ಸಮರ್ಥಿಸಿಕೊಂಡರು.

https://www.youtube.com/watch?v=OflAzK4wALY

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *