ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಕೈ ಮುಖಂಡರು ಶಾಕ್ ನೀಡಲು ಮುಂದಾಗಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಸಹೋದರ ಸತೀಶ್ ಜಾರಕಿಹೊಳಿ ಅವರಿಗೆ ನೀಡಲು ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ.
ಕಾಂಗ್ರೆಸ್ ನಾಯಕರ ಈ ತೀರ್ಮಾನಕ್ಕೆ ಪ್ರಮುಖ ಕಾರಣವೂ ಇದ್ದು, ರಮೇಶ್ ಜಾರಕಿಹೊಳಿ ಅವರೊಂದಿಗೆ ಬಂಡಾಯದ ಸಮಯದಲ್ಲಿ ಸಮಾಧಾನದಿಂದ ಮಾತುಕತೆ ನಡೆಸುವುದು ಕಷ್ಟಸಾಧ್ಯ. ಅಲ್ಲದೇ ಅವರ ನೇರ ನುಡಿ ಸರ್ಕಾರದ ಮೇಲೆ ಹೆಚ್ಚು ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಿದರೆ ಎಲ್ಲಾ ಸಮಸ್ಯೆಗಳು ಬಗೆಹರಿಸಬಹುದು ಎನ್ನುವ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಬಂಡಾಯ ಮುಂದಾಳತ್ವ ವಹಿಸಿ ಹಲವು ಶಾಸಕರನ್ನು ತಮ್ಮತ್ತ ಸೆಳೆದಿದ್ದರು. ಅಲ್ಲದೇ ಹಲವು ಅತೃಪ್ತರು ಕೂಡ ರಮೇಶ್ ಜಾರಕಿಹೊಳಿ ನಿರ್ಧಾರಕ್ಕೆ ತಾವು ಬದ್ಧ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಇದನ್ನು ಗಮನಿಸಿರುವ ಕಾಂಗ್ರೆಸ್ ಮುಖಂಡರು ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಿದರೆ ಅತೃಪ್ತರ ಬಣವನ್ನು ತಣಿಸಲು ಸಾಧ್ಯ. ಅಲ್ಲದೇ ಸತೀಶ್ ಜಾರಕಿಹೊಳಿ ಅವರು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡುತ್ತಾರೆ ಎನ್ನುವ ಅಭಿಪ್ರಾಯಕ್ಕೆ ಬಂದಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ಹೊಂದಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ತಪ್ಪಿಸಿ ಸಮ್ಮಿಶ್ರ ಸರ್ಕಾರದಲ್ಲಿ ಸ್ಥಾನ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಸದ್ಯ ಕೈ ನಾಯಕರ ಈ ನಡೆಯೇ ಅವರಿಗೆ ಮುಳುವಾಗಿದ್ದ ಕಾರಣ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಇದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply