100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

ಅದೃಷ್ಟವಶಾತ್ ಘಟನೆ ವೇಳೆ ಬಸ್‌ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *