ಗದಗ: ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ನಡೆದಿದೆ.
ಶೋಭಾ ಹಂಗನಕಟ್ಟಿ (10) ಮೃತ ಬಾಲಕಿಯಾಗಿದ್ದು, ಶಾಲೆಗೆ ಹೊರಟ್ಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಊರಿಗೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ವಿದ್ಯಾರ್ಥಿನಿ ಅದೇ ಮಾರ್ಗದಲ್ಲಿ ಬಂದಿದ್ದ ಟ್ರ್ಯಾಕ್ಟರ್ ಏರಿ ಶಾಲೆಗೆ ಹೊರಟಿದ್ದಳು. ಹೊಸಳ್ಳಿಯಿಂದ ಕಡಕೋಳ ಸರ್ಕಾರಿ ಶಾಲೆಗೆ ಟ್ರ್ಯಾಕ್ಟರ್ ಏರಿ ಹೊರಟಿದ್ದ ವೇಳೆ ಮಾರ್ಗ ಮಧ್ಯೆ ತಿರುವಿನಲ್ಲಿ ಆಯತಪ್ಪಿ ಟ್ರ್ಯಾಕ್ಟರ್‌ನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಶಾಲೆಗೆ ಹೋಗುವ ಅನೇಕ ಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಗ್ರಾಮಸ್ಥರು ಮನವಿ ಮಾಡಿದ್ದರೂ ಕೂಡ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿರಲಿಲ್ಲ. ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇದೀಗ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಗದಗ ಜಿಲ್ಲೆಯ ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೇರಳ ವಿದ್ಯಾರ್ಥಿಗಳ ಬೀದಿರಂಪಾಟ – ಪೊಲೀಸರ ಮೇಲೆ ಹಲ್ಲೆ

Leave a Reply