ಬಾಬಾ ಸಿದ್ದಿಕಿ ಹತ್ಯೆ ಕೇಸ್‌ | ಮತ್ತೋರ್ವ ಆರೋಪಿ ಅರೆಸ್ಟ್‌ – ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಮುಂಬೈ: ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣದಲ್ಲಿ ಮುಂಬೈ (Mumbai) ಪೊಲೀಸರು (Police) ಸ್ಕ್ರ್ಯಾಪ್ ಡೀಲರ್ ಒಬ್ಬನನ್ನು ಬಂಧಿಸಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆ ಕಂಡಿದೆ.

ಬಂಧಿತ ಆರೋಪಿಯನ್ನು ರಾಜಸ್ಥಾನದ ಉದಯಪುರ ಮೂಲದ ಭಗವತ್ ಓಂ ಸಿಂಗ್ (32) ಎಂದು ಗುರುತಿಸಲಾಗಿದೆ. ಆತ ಈಗ ಮುಂಬೈನಲ್ಲಿ ನೆಲೆಸಿದ್ದ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅ.26 ರವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಆರೋಪಿ ಮೊಬೈಲ್‌ನಲ್ಲಿ ಸಿದ್ದಿಕಿ ಪುತ್ರನ ಫೋಟೋ ಪತ್ತೆ

ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಐವರನ್ನು ಪಿಸ್ತೂಲ್‌ ಒದಗಿಸಿದ ಕಾರಣಕ್ಕಾಗಿ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಧರ್ಮರಾಜ್ ಕಶ್ಯಪ್ (19) ಹರೀಶ್‌ಕುಮಾರ್ ಬಾಲಕ್ರಮ್ ನಿಸಾದ್ (23) ಮತ್ತು ಪ್ರವೀಣ್ ಲೋಂಕರ್ (28) ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಶಿವಕುಮಾರ್ ಗೌತಮ್‌ಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಅ.12 ರಂದು, ಬಾಂದ್ರಾದಲ್ಲಿರುವ ಪುತ್ರ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು.

ಬಾಬಾ ಸಿದ್ದಿಕಿಯವರ ಹತ್ಯೆಯ ಆರೋಪಿಗಳಾದ ಮೂವರು ಶೂಟರ್‌ಗಳು ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು. ಈ ವೇಳೆ ಯೂಟ್ಯೂಬ್‌ನಲ್ಲಿ ಟ್ಯುಟೋರಿಯಲ್ ವೀಡಿಯೊಗಳನ್ನು ನೋಡಿ ಬಂದೂಕುಗಳನ್ನು ಹೇಗೆ ಬಳಸಬೇಕೆಂದು ಕಲಿತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಆರೋಪಿಗಳು ಸುಮಾರು ನಾಲ್ಕು ವಾರಗಳ ಕಾಲ ಅಂತಹ ವೀಡಿಯೊಗಳನ್ನು ವೀಕ್ಷಿಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಇದನ್ನೂ ಓದಿ: ಮಾಧ್ಯಮಗಳ ಎದುರು ನಕಲಿ ಎನ್‌ಕೌಂಟರ್‌ ಆರೋಪ ಮಾಡಿದ ಬಿಷ್ಣೋಯ್ ಗ್ಯಾಂಗ್‌ನ ಶೂಟರ್‌!