ಮಂಗಳೂರು: ಎಸ್ಡಿಪಿಐ ವಲಯ ಅಧ್ಯಕ್ಷನನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಅಶ್ರಫ್ (30) ಕೊಲೆಯಾದ ವ್ಯಕ್ತಿ. ಮಂಗಳೂರು ಜಿಲ್ಲೆ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಈ ಘಟನೆ ನಡೆದಿದೆ. ಬೈಕಿನಲ್ಲಿ ಬಂದ ಮುಸುಕುಧಾರಿಗಳು ಆಟೋ ತಡೆದು ಅಶ್ರಫ್ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಅಶ್ರಫ್ ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಳೇ ವೈಷಮ್ಯದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಕಲ್ಲಡ್ಕದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಅಂಗಡಿ-ಮುಂಗಟ್ಟಿಗಳನ್ನ ಮುಚ್ಚಿಸುತ್ತಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.





Leave a Reply