ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

ಬೆಂಗಳೂರು: ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಮೂಲತಃ ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್‌ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ ಕಾರ್ಯ ನಿರ್ವಹಿಸಿದ್ದರು.

ಬೆಂಗಳೂರು ಪೂರ್ವ ವಿಭಾಗದ ಐಜಿಯಾಗಿ ಕೆಲಸ ನಿರ್ವಹಿಸಿದ್ದರು. ಎಸಿಬಿ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಈಗ 39 ನೇ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನಿಯುಕ್ತಿಗೊಂಡಿದ್ದಾರೆ.