ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ – ಕ್ರಿಮಿನಾಶಕ ಸೇವಿಸಿದ ಕೈದಿಗಳು

ಶಿವಮೊಗ್ಗ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ನಾಲ್ಕು ಮಂದಿ ಕೈದಿಗಳು ಜೈಲಿನಲ್ಲಿ ಕ್ರಿಮಿನಾಶಕ ಸೇವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಜಮೀರ್ ಜಾನಿ ಬಚ್ಚಾ (25), ನದೀಮ್ (21), ಇಮ್ರಾನ್ (26), ತೊಹಿಬ್ (24) ಕ್ರಿಮಿನಾಶಕ ಸೇವಿಸಿದ ಕೈದಿಗಳು. ಈ ನಾಲ್ವರು ಕೈದಿಗಳು ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ, ಒಂದೇ ಸೆಲ್‍ನಲ್ಲಿದ್ದರು.

ಈ ಮೊದಲು ಇವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿ ಒಬ್ಬರಿಗೆ ಬೆದರಿಕೆ ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆಂದು ಪೊಲೀಸರು ಶಿವಮೊಗ್ಗಕ್ಕೆ ಕರೆ ತಂದಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ವಿಚಾರಣೆ ನಂತರ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಕೈದಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವಂತೆ ಅಧಿಕಾರಿಗಳಿಗೆ ಒತ್ತಡ ಹಾಕುತ್ತಿದ್ದರು. ಇದಕ್ಕೆ ಕಾರಗೃಹದ ಅಧಿಕಾರಿಗಳು ಒಪ್ಪಿರಲಿಲ್ಲ.

ಇದರಿಂದಾಗಿ ನಾಲ್ವರು ಕೈದಿಗಳು ನಿನ್ನೆ ತಡರಾತ್ರಿ ಕ್ರಿಮಿನಾಶಕ ಔಷಧಿ ಸೇವಿಸಿದ್ದಾರೆ. ಕ್ರಿಮಿನಾಶಕ ಸೇವಿಸಿದ್ದ ಮೂವರು ಕೈದಿಯನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಕೈದಿಗೆ ಜೈಲಿನಲ್ಲಿ ಕಾರಾಗೃಹದಲ್ಲಿಯೇ ಚಿಕಿತ್ಸೆ ನೀಡಿದ್ದಾರೆ. ಇದನ್ನೂ ಓದಿ:  ಟೆರೇಸ್‍ನಿಂದ ಜಿಗಿದು ಮಾಡೆಲ್ ಆತ್ಮಹತ್ಯೆಗೆ ಯತ್ನ

ಕಳೆದ ಮೂರು ದಿನದ ಹಿಂದೆ ಕೈದಿಗಳು ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಕೈದಿ ಬಚ್ಚಾ ತಾನೇ ಸ್ವತಃ ಟೂಬ್ ಲೈಟ್‍ನಲ್ಲಿ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ. ಅವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಪುನಃ ಈ ರೀತಿಯ ಘಟನೆಗೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಈ ನಾಲ್ವರು ಕೈದಿಗಳು ಪೊಲೀಸ್ ಅಧಿಕಾರಿಗಳಿಗೆ ತಲೆನೋವಾಗಿದ್ದಾರೆ. ಇದನ್ನೂ ಓದಿ: ರಾಹುಲ್‍ ಗಾಂಧಿ ಮೋದಿ ಫೋಬಿಯಾದಿಂದ ಬಳಲುತ್ತಿದ್ದಾರೆ: ಅಮಿತ್ ಶಾ

Comments

Leave a Reply

Your email address will not be published. Required fields are marked *