ನ್ಯೂಯಾರ್ಕ್: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಅವರ ತಂತ್ರಜ್ಞಾನ ರಾಯಭಾರಿಯಾಗಿ ಭಾರತೀಯ ರಾಜತಾಂತ್ರಿಕ ಅಧಿಕಾರಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.
2016 ರಿಂದ 2018 ರವರೆಗೆ ಜಿನೀವಾದಲ್ಲಿ ನಡೆದ ನಿಶಸ್ತ್ರೀಕರಣದ ಸಮ್ಮೇಳನಕ್ಕೆ ಭಾರತೀಯ ರಾಯಭಾರಿ ಹಾಗೂ ಖಾಯಂ ಪ್ರತಿನಿಧಿಯಾಗಿದ್ದ ಗಿಲ್, ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್‌ನ ಅಂತಾರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮತ್ತು ಕೃತಕ ಬುದ್ಧಿಮತ್ತೆ ಸಂಶೋಧನಾ ಸಹಯೋಗದ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಕೋಲ್ಡ್ ವಾರ್ – ನಟಿ ಅನುಷ್ಕಾ ಶೆಟ್ಟಿ ಸಹೋದರನ ಕೊಲೆಗೆ ಸ್ಕೆಚ್

ಪಂಜಾಬ್ ವಿವಿಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಕಮ್ಯುನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್‌ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಹಾಗೂ ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್
ಅಮನ್ ದೀಪ್ ಸಿಂಗ್ ಗಿಲ್ ಅವರು ಡಿಜಿಟಲ್ ತಂತ್ರಜ್ಞಾನದ ಚಿಂತನೆಯ ನಾಯಕನಾಗಿದ್ದು, ಡಿಜಿಟಲ್ ತಂತ್ರಜ್ಞಾನಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದಾರೆ. ಡಿಜಿಟಲ್ ರೂಪಾಂತರಗಳನ್ನು ಜವಾಬ್ದಾರಿಯುತವಾಗಿ ಹಾಗೂ ಅಭಿವೃದ್ಧಿಗೊಳಿಸುವ ಬಗ್ಗೆ ಒಳ್ಳೆಯ ತಿಳುವಳಿಕೆ ಹೊಂದಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

Leave a Reply