ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಸರಣಿ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೈಕ್‍ನ ಹಿಂಬದಿ ಸವಾರ ಆಂಧ್ರಪ್ರದೇಶ ಮೂಲದ 26 ವರ್ಷದ ರಂಗಸ್ವಾಮಿ ಮೃತ ದುರ್ದೈವಿ. ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಹೊರಬರುತ್ತಿದ್ದಂತೆ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಆಟೋ ರಾಜಕಾಲುವೆಗೆ ಉರುಳಿದೆ. ಈ ವೇಳೆ ಆಟೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲದೆ ರಸ್ತೆ ಬದಿ ನಿಂತಿದ್ದ ರಂಜಿತಾ ಎಂಬವರಿಗೆ ಬಸ್ ತಾಕಿದ್ದು ಅವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


https://www.youtube.com/watch?v=33XNxaS07sA

Leave a Reply