ಬೆಳಗಾವಿ: ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 2 ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಚಿಕ್ಕೋಡಿ ತಾಲೂಕಿನ ಕೇರೂರ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯಪುರದಿಂದ ಸಂಕೇಶ್ವರ ಪಟ್ಟಣಕ್ಕೆ ಬುಲೆಟ್‍ನಲ್ಲಿ ಬರುತ್ತಿದ್ದ ಸಂಕೇಶ್ವರ ಪಟ್ಟಣದ ನಿವಾಸಿ ಕಿಶೋರ ಕುಮಾರ ಶಹಾ(38) ಮೃತ ವ್ಯಕ್ತಿ. ಮಹಾರಾಷ್ಟ್ರ ಮೂಲದ ಬಾರಸಿದ ಮಹಾನಂದಾ ಜಗದಾಳೆ(40), ದಶರಥ ಜಗದಾಳೆ(52), ಅಂಕಲಿ ಗ್ರಾಮದ ನವೀನ ಕರಾಡಕರ(29) ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಅಥಣಿ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ 2 ಬೈಕ್‍ಗಳ ಮೇಲೆ ಬಂದ ಪರಿಣಾಮ ಬೈಕ್‍ಗಳ ನಡುವೆ ಅಪಘಾತ ಸಂಭವಿಸಿದೆ. ನಂತರ ಬೊಲೆರೋ ವಾಹನ ಪಲ್ಟಿಯಾಗಿದೆ.

ಬೊಲೆರೋ ವಾಹನದ ಚಾಲಕ ಹಾಗೂ ಇನ್ನೊಂದು ಬೈಕ್ ಮೇಲೆ ಇದ್ದ ಬೈಕ್ ಸವಾರರಿಗೆ ಗಂಭೀರ ಗಾಯವಾಗಿದ್ದು, ಬುಲೆಟ್ ವಾಹನ ಸವಾರ ಸಾವನ್ನಪ್ಪಿದ್ದಾರೆ. ಅಂಕಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







Leave a Reply