ವಾಷಿಂಗ್ಟನ್: ಕಳೆದ ಹಲವು ದಿನಗಳಿಂದ ಅಮೆರಿಕದಲ್ಲಿ ಗುಂಡಿನ ದಾಳಿಗಳು ಸುದ್ದಿಯಾಗುತ್ತಲೇ ಇದ್ದು ಸೋಮವಾರ ಮತ್ತೆ ಸದ್ದು ಕೇಳಿಬಂದಿದೆ.
ಅಮೆರಿಕ ರಾಜಧಾನಿ ವಾಷಿಂಗ್ಟನ್‌ನ ಡಿಸಿಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಹಲವು ಜನರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಯು ಸ್ಟ್ರೀಟ್‌ನ ಮೊಚೆಲ್ಲಾ ಸಂಗೀತ ಕಾರ್ಯಕ್ರಮದಲ್ಲಿ ಘಟನೆ ನಡೆದಿದ್ದು, ಈ ಪ್ರದೇಶ ಶ್ವೇತಭವನದಿಂದ ಕೇವಲ 2 ಮೈಲಿ ದೂರವಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಘಟನೆ ನಡೆದ ಪ್ರದೇಶದಲ್ಲಿ ಜನರು ಓಡಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್

ಅಮೆರಿಕದಲ್ಲಿ ಹೆಚ್ಚುತ್ತಿರುವ ಗುಂಡಿನ ದಾಳಿಗೆ ಕಡಿವಾಣ ಹಾಕಲು ಬಂದೂಕಿನ ಪರವಾನಗಿ ನೀಡುವ ವಯಸ್ಸಿನ ಮಿತಿಯನ್ನು ಹೆಚ್ಚಿಸಿದೆ. ಮಕ್ಕಳು ಹಾಗೂ ಕುಟುಂಬಗಳನ್ನು ರಕ್ಷಿಸುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಂದೂಕು ಕೊಳ್ಳುವವರ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಇನ್ನೂ ಪತ್ತೆಯಾಗದ `ದಿ ಪಾರ್ಕ್’ ಡ್ರಗ್ ಮೂಲ – 40 ಫಾರಿನ್ ಮಾಡೆಲ್‍ಗಳಿಗೆ ಪೊಲೀಸ್ ನೋಟಿಸ್
ಕಳೆದ ತಿಂಗಳ ಆರಂಭದಲ್ಲಿ ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 19 ಮಕ್ಕಳು ಸೇರಿದಂತೆ ಹಲವು ಜನ ಸಾವನ್ನಪ್ಪಿದ್ದರು.

Leave a Reply