ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು

CRIME

ಚೆನ್ನೈ: ತಮಿಳುನಾಡಿನ (Tamil Nadu) ಪ್ರತಿಷ್ಠಿತ ಶಾಸ್ತ್ರೀಯ ಕಲೆಗಳ ಸಂಸ್ಥೆಯಾದ ಕಲಾಕ್ಷೇತ್ರದ (Kalakshetra) ಪ್ರೊಫೆಸರ್ (Professor) ಒಬ್ಬರ ಮೇಲೆ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ.

ಸಂಸ್ಥೆಯ ಮಾಜಿ ವಿದ್ಯಾರ್ಥಿನಿಯೊಬ್ಬರು ತಮ್ಮ ಮೇಲೆ ಪ್ರೊಫೆಸರ್ ಒಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೂರಿನಡಿ ಚೆನ್ನೈ (Chennai) ಪೊಲೀಸರು ಪ್ರೊಫೆಸರ್ ಹರಿ ಪದ್ಮನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ ಮೂವರ ರೆಪರ್ಟರಿ ಕಲಾವಿದರಿಂದ ನಿಂದನೆ ಹಾಗೂ ಬಾಡಿ ಶೇಮಿಂಗ್ ನಡೆದಿದೆ ಎಂದು ಆರೋಪಿಸಿದ್ದಾರೆ. 200ಕ್ಕೂ ಹೆಚ್ಚೂ ವಿದ್ಯಾರ್ಥಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸ್ಥೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ

ಕಲಾಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ, ಬಣ್ಣದ ಆಧಾರದ ಮೇಲೆ ತಾರತಮ್ಯ ಹಾಗೂ ನಿಂದನೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಏನು ಪ್ರಯೋಜನವಾಗಿಲ್ಲ. ಸಂಸ್ಥೆಯ ನಿರ್ದೇಶಕಿ ರೇವತಿ ರಾಮಚಂದ್ರನ್ ಅವರನ್ನು ವಜಾಗೊಳಿಸಬೇಕು. ಸಂಸ್ಥೆಯ ಆಂತರಿಕ ದೂರು ಸಮಿತಿಯನ್ನು ಪುನರ್ ರಚಿಸಬೇಕು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ (G.Kishan Reddy) ಹಾಗೂ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪ್ರತಿಭಟನಾಕಾರರು ಪತ್ರ ಬರೆದು ಒತ್ತಾಯಿಸಿದ್ದಾರೆ.

90 ವಿದ್ಯಾರ್ಥಿಗಳು ಶುಕ್ರವಾರ ಮಹಿಳಾ ಆಯೋಗದ ಮುಖ್ಯಸ್ಥರಿಗೆ ದೂರು ನೀಡಿದ್ದರು. ತಪ್ಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಮ್.ಕೆ ಸ್ಟಾಲಿನ್ (M.K Stalin) ಭರವಸೆ ನೀಡಿದ್ದಾರೆ. ಈ ಹಿಂದೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಈ ಆರೋಪಗಳನ್ನು ಸುಳ್ಳು ಮಾಹಿತಿ ಎಂದು ನಿರಾಕರಿಸಿತ್ತು. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು