ನಾಲ್ಕು ತಿಂಗಳ ಮಗುವಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಲಕ್ನೋ: ನಾಲ್ಕು ತಿಂಗಳ ಹಸುಗೂಸನ್ನು (Infant) ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ.

ಸಂದೀಪನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪದ ಮೇಲೆ 27 ವರ್ಷದ ಪ್ರಸಾದ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಮತ್ತು ಹಸುಗೂಸು ಒಂದೇ ಗ್ರಾಮದವರಾಗಿದ್ದು, ಮಗುವಿನ ಮನೆಗೆ ಬಂದ ಪ್ರಸಾದ್ ಆಟವಾಡುವ ನೆಪದಲ್ಲಿ ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದಾನೆ ಎಂದು ಸರ್ಕಲ್ ಆಫೀಸರ್ ಯೋಗೇಂದ್ರ ಕೃಷ್ಣ ನಾರಾಯಣ್ ತಿಳಿಸಿದ್ದಾರೆ. ಇದನ್ನೂ ಓದಿ: 4 ವರ್ಷ ಪ್ರೀತಿಸಿ ಕೈಕೊಟ್ಟ ಪ್ರಿಯಕರ- ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದ ಯುವತಿ ಸಾವು

ಮಗುವಿನ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಆರೋಪಿ ಪ್ರಸಾದ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ ಮಗುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]