ಕಿಂಗ್‌ ಕೊಹ್ಲಿ, ರೋಹಿತ್‌ ಬಯೋಪಿಕ್‌ನಲ್ಲಿ ನಟಿಸುತ್ತಾರಾ ಶಾಹಿದ್ ಕಪೂರ್?

ಮುಂಬೈ: ವಿಶ್ವದಾದ್ಯಂತ ತನ್ನದೇ ಅಭಿಮಾನಿ ಬಳಗ ಹೊಂದಿರುವ ವಿರಾಟ್‌ ಕೊಹ್ಲಿ (Virat Kohli) ಹಾಗೂ ರೋಹಿತ್‌ ಶರ್ಮಾ (Rohit Sharma) ಸದ್ಯ ವಿಶ್ವಕಪ್‌ನಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಸತತ 6 ಪಂದ್ಯಗಳನ್ನೂ ಗೆದ್ದಿರುವ ಟೀಂ ಇಂಡಿಯಾ ಸೆಮಿಫೈನಲ್‌ ಪ್ರವೇಶಿಸಲು ಇನ್ನೊಂದೇ ಗೆಲುವು ಬಾಕಿಯಿದೆ.

ಕೊಹ್ಲಿ ಹಾಗೂ ರೋಹಿತ್‌ ಮೇಲಿನ ಅಭಿಮಾನಕ್ಕೆ ಸಿನಿ ತಾರೆಯರೂ ಹೊರತಾಗಿಲ್ಲ. ಕೆಲ ದಿನಗಳ ಹಿಂದೆ RRR ಸಿನಿಮಾ ಸಕ್ಸಸ್‌ ನಂತರ ತೆಲುಗು ಖ್ಯಾತ ನಟ ರಾಮ್‌ ಚರಣ್‌ ವಿರಾಟ್‌ ಕೊಹ್ಲಿ ಬಯೋಪಿಕ್‌ನಲ್ಲಿ ನಟಿಸುವಾಸೆ ವ್ಯಕ್ತಪಡಿಸಿದ್ದರು. ಇದೀಗ ಬಾಲಿವುಡ್‌ ಸ್ಟಾರ್‌ ಶಾಹಿದ್ ಕಪೂರ್ (Shahid Kapoor), ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಇಬ್ಬರ ಬಯೋಪಿಕ್‌ನಲ್ಲಿಯೂ ನಟಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಿಸಿಬಿಗೆ ಪಾಕಿಸ್ತಾನ ವಿಶ್ವಕಪ್ ಗೆಲ್ಲುವುದು ಬೇಕಿಲ್ಲ: ಪಾಕ್ ಆಟಗಾರನ ಆರೋಪ

ಸಂದರ್ಶನವೊಂದರಲ್ಲಿ ಮಾತನಾಡಿರುವ ಶಾಹಿದ್ ಕಪೂರ್, ನಾನು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದೊಡ್ಡ ಅಭಿಮಾನಿ. ಅವರಿಬ್ಬರ ಜೀವನ ಚರಿತ್ರೆಯಲ್ಲಿ ನಟಿಸುವುದು ನನ್ನ ಭಾಗ್ಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಹೇಳಿಕೆ ಹೊರಬೀಳುತ್ತಿದ್ದಂತೆ, ಕೊಹ್ಲಿ-ರೋಹಿತ್‌ ಲೈಫ್‌ಸ್ಟೋರಿ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದನ್ನೂ ಓದಿ: ಬಾತುಕೋಳಿ ತಲೆಗೆ ಕೊಹ್ಲಿ ಫೋಟೊ ಹಾಕಿ ತಗ್ಲಾಕ್ಕೊಂಡ ಇಂಗ್ಲೆಂಡ್‌ ಫ್ಯಾನ್ಸ್‌ – ಇಂಗ್ಲೆಂಡ್‌ ಆರ್ಮಿಗೆ ಭಾರತ್‌ ಆರ್ಮಿ ಕೌಂಟರ್‌

ಸಿನಿಮಾವನ್ನ ಯಾರು ನಿರ್ದೇಶನ ಮಾಡ್ತಾರೆ? ಯಾವಾಗ ತೆರೆಗೆ ಬರುತ್ತೆ? ಒಂದು ವೇಳೆ ಕೊಹ್ಲಿ ರೋಹಿತ್‌ ಇಬ್ಬರ ಕ್ಯಾರೆಕ್ಟರ್‌ ಒಟ್ಟಿಗೆ ಬಂದರೆ, ಮತ್ತೊಂದು ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ? ಎಂಬೆಲ್ಲಾ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹುಟ್ಟಿಕೊಂಡಿದೆ. ಇದನ್ನೂ ಓದಿ: Ind Vs Pak: ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ – ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಮತ್ತೆ ಕ್ಲಾಸ್‌

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]