ಒಟಿಟಿಗೆ ಬಂತು ಜ್ಯೋತಿಕಾ ನಟನೆಯ ಶೈತಾನ್ ಸಿನಿಮಾ

ಕ್ಷಿಣ ಭಾರತದ ಹೆಸರಾಂತ ನಟಿ, ನಿರ್ಮಾಪಕಿ ಜ್ಯೋತಿಕಾ (Jyothika) ನಟನೆಯ ಶೈತಾನ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ನಾಳೆಯಿಂದ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿರಲಿದೆ. ಬರೋಬ್ಬರಿ 25 ವರ್ಷಗಳ ಬಳಿಕ ಬಾಲಿವುಡ್ ಗೆ ಜ್ಯೋತಿಕಾ ಈ ಸಿನಿಮಾದ ಮೂಲಕ ಮರಳಿದ್ದಾರೆ. ಶೈತಾನ್ (Shaitan) ಸಿನಿಮಾದಲ್ಲಿ ಅವರು ಹೊಸ ಬಗೆಯ ಪಾತ್ರ ಮಾಡಿದ್ದಾರೆ.

ಹಾರರ್ ಕಥಾನಕ ಹೊಂದಿರುವ ಸಿನಿಮಾದ ದೃಶ್ಯಗಳು ಬೆಚ್ಚಿ ಬೀಳಿಸುತ್ತಿವೆ. ವಶೀಕರಣದ ವಿಷಯವನ್ನೂ ಸಿನಿಮಾ ಒಳಗೊಂಡಿದೆ. ಜ್ಯೋತಿಕಾ ಹಿಂದೆ ಹಿಂದಿ, ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿ, ಆನಂತರ ಚಿತ್ರೋದ್ಯಮದಿಂದಲೇ ದೂರವಾಗಿದ್ದರು. ಇದೀಗ ಬಾಲಿವುಡ್ (Bollywood) ಶೈತಾನ್ ಸಿನಿಮಾವನ್ನು ಒಪ್ಪಿಕೊಳ್ಳುವ ಮೂಲಕ ಮತ್ತೆ ಚಿತ್ರರಂಗದಲ್ಲಿ ಸಕ್ರೀಯರಾಗಿದ್ದಾರೆ.

 

ಅಜಯ್ ದೇವಗನ್ (Ajay Devgn) ಕೂಡ ಸಿನಿಮಾದಲ್ಲಿ ನಟಿಸಿದ್ದು, ಜ್ಯೋತಿಕಾ ಇವರ ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾರರ್ ಚಿತ್ರವಾಗಿದ್ದು, ಆರ್. ಮಧುವನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.