ಪಾಲಿಕೆ ಚುನಾವಣೆಯಲ್ಲಿ ಗೆಲುವು ನಿಶ್ಚಿತ: ಶಂಕರ್ ಪಾಟೀಲ್ ಮುನೇನಕೊಪ್ಪ

ಹುಬ್ಬಳ್ಳಿ: ಈ ಬಾರಿಯ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಪಾಲಿಕೆ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು ಎಂದರು.  ಇದನ್ನೂ ಓದಿ: ಕಲುಷಿತ ಗಾಳಿಯನ್ನು ಶುದ್ಧಗೊಳಿಸುವ ಹೊಗೆ ಗೋಪುರ- ದೇಶದಲ್ಲೇ ಮೊದಲು

 ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರಿಗೆ ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕಿಟ್, ಬೆಡ್ ಒದಗಿಸುವುದು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಪಕ್ಷ ನೋಡದೇ ಎಲ್ಲರಿಗೂ ಸರ್ಕಾರದ ಯೋಜನೆಯನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಿದ್ದೇವೆ. ಜನರಿಗೆ ಬಿಜೆಪಿ ಪಕ್ಷದ ನಂಬಿಕೆ ಇದೆ. ಅವರು ಪಾಲಿಕೆ ಚುನಾವಣೆಯಲ್ಲಿ ಆರ್ಶೀವಾದ ಮಾಡಲಿದ್ದಾರೆ ಎಂದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಅಭಿವೃದ್ಧಿಯ ಪಕ್ಷದ ಪ್ರಣಾಳಿಕೆ ತಯಾರಿಸಲಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು. ಈ ವೇಳೆ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬಸವರಾಜ್ ಕುಂದಗೋಳಮಠ, ಎಮ್. ಆರ್.ಪಾಟೀಲ್ ಗಣ್ಯರು ಸೇರಿದಂತೆ ಕಾರ್ಯಕರ್ತರು ಮುಂತಾದವರು ಇದ್ದರು.

Comments

Leave a Reply

Your email address will not be published. Required fields are marked *