ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ – ರೇಸ್‌ನಲ್ಲಿದ್ದಾರೆ ಶಶಿ ತರೂರ್

ನವದೆಹಲಿ: ಸಂಸದ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದ್ದು, ಆದರೆ ಇನ್ನೂ ಕಾಂಗ್ರೆಸ್‌ನಿಂದ ಅಂತಿಮ ನಿರ್ಧಾರ ಹೊರಬಿದ್ದಿಲ್ಲ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್‌ನ ಹಿರಿಯ ಮುಖಂಡ ಶಶಿ ತರೂರ್ ಅವರನ್ನು ಪ್ರಶ್ನಿಸಿದಾಗ ಯಾವುದೇ ಅಭಿಪ್ರಾಯವನ್ನು ನೀಡಿರಲಿಲ್ಲ. ಜೊತೆಗೆ ಈ ಪ್ರಸ್ತಾಪವನ್ನು ನಿರಾಕರಿಸಲಿಲ್ಲ. ಬದಲಿಗೆ ಪಕ್ಷದ ಮುಖ್ಯಸ್ಥರ ಹುದ್ದೆಗೆ ಮುಕ್ತ ಹಾಗೂ ನ್ಯಾಯಯುತವಾಗಿ ಚುನಾವಣೆ ನಡೆಯಲಿ ಎಂದು ಮಲಯಾಳಂ ಪತ್ರಿಕೆಯಲ್ಲಿ ಲೇಖನವೊಂದನ್ನು ಬರೆದಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಖಾಲಿಯಿರುವ ಸ್ಥಾನಗಳಿಗೂ ಚುನಾವಣೆ ನಡೆಯಲಿ ಎಂದೂ ಅವರು ಲೇಖನದಲ್ಲಿ ಬರೆದುಕೊಂಡಿದ್ದರು. ಈ ಲೇಖನ ಇದೀಗ ಚರ್ಚೆಗೆ ಗ್ರಾಸವಾಗುತ್ತಿದೆ.

ಪಕ್ಷದೊಳಗೆ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ 2020 ರಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ನಾಯಕರ ಗುಂಪಿನಲ್ಲಿ ಶಶಿ ತರೂರ್ ಕೂಡ ಒಬ್ಬರಾಗಿದ್ದರು. ಇದನ್ನೂ ಓದಿ: ಆಜಾದ್ ಬೆಂಬಲಿಸಿ 51 ನಾಯಕರ ರಾಜೀನಾಮೆ – ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಆಘಾತ

ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಹಿರಿಯ ಮುಖಂಡ ಶಶಿ ತರೂರ್ ಅವರು ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಖಚಿತ ಪಡಿಸಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಬೆಂಬಲ ಕೋರಿ ವಿವಿಧ ರಾಜ್ಯ ಪಕ್ಷದ ನಾಯಕರನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಆಂತರಿಕ ಕೋಲಾಹಲವನ್ನು ಎದುರಿಸುತ್ತಿರುವ ಕಾಂಗ್ರೆಸ್ ಭಾನುವಾರ ಅಧ್ಯಕ್ಷೀಯ ಚುನಾವಣೆಯನ್ನು ಅ.17 ರಂದು ನಡೆಯಲಿದ್ದು, ಅದರ ಫಲಿತಾಂಶವು ಅ.19ಕ್ಕೆ ಪ್ರಕಟವಾಗಲಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಇರಾಕ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಗುಂಡಿನ ದಾಳಿಗೆ 23 ಮಂದಿ ಸಾವು, 300 ಜನರಿಗೆ ಗಾಯ

ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯು ಬಹಿರಂಗ ಚುನಾವಣೆ ಆಗಿದೆ. ಇದರಿಂದ ಈ ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ತಿಳಿಸಿದ್ದರು. ಆದರೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿ ಅನೇಕ ಮುಖಂಡರು ಪುನಃ ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗುವಂತೆ ಬಯಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *