ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ವಿ.ಕೆ. ಶಶಿಕಲಾರವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರು ಜೈಲಿನಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಖೈದಿಯಾಗಿರುವ ಶಶಿಕಲಾರವರ ಆರೋಗ್ಯದಲ್ಲಿ ಶುಕ್ರವಾರ ಬೆಳಗ್ಗೆ ಏರುಪೇರು ಕಂಡುಬಂದಿದೆ. ಪದೇ ಪದೇ ಅವರ ಬಿಪಿ ಹಾಗೂ ಶುಗರ್ ಪ್ರಮಾಣ ಹೆಚ್ಚಳವಾಗುತ್ತಿದ್ದು, ಹೀಗಾಗಿ ವೈದ್ಯರು ಜೈಲಿನಲ್ಲಿರುವ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನ ಮೂಲಗಳು ಮಾಹಿತಿ ನೀಡಿವೆ.
ಶಶಿಕಲಾ ಕಳೆದ ಆರು ತಿಂಗಳ ಹಿಂದೆ ಅತಿಯಾದ ಶುಗರ್ ಕಾಣಿಸಿಕೊಂಡು ಚೆಂತರಿಸಿಕೊಂಡಿದ್ದರು. ಒಂದು ವೇಳೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದಿದ್ದರೆ, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವ ಕುರಿತು ಜೈಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply