ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

ಹಾಸನ: ಹೆದ್ದಾರಿ ಕಾಮಗಾರಿ ನಡೆಸುವ ಸಲುವಾರಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್ ಮಾಡುವ ವಿಚಾರವಾಗಿ ಮತ್ತೆ ಚರ್ಚೆ ಶುರುವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ದೋಣಿಗಾಲ್ ನಿಂದ ಮಾರನಹಳ್ಳಿವರೆಗೆ ಸುಮಾರು 14 ಕಿಲೋಮೀಟರ್ ದೂರ ಶಿರಾಡಿ ಹೆದ್ದಾರಿ ಬಂದ್ ಮಾಡಿ, ಕಾಮಗಾರಿ ನಡೆಸಲು ಗುತ್ತಿಗೆದಾರರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಿಂದ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೋಗಲು ಶಿರಾಡಿಘಾಟ್ ರಸ್ತೆಯೇ ಮುಖ್ಯ ರಸ್ತೆಯಾಗಿದೆ. ಅಷ್ಟೇ ಅಲ್ಲದೆ ಚನ್ನೈ ಟು ಮಂಗಳೂರು ಬಂದರಿಗೆ ಕೂಡ ಇದೇ ಶಿರಾಡಿಘಾಟ್ ಮೂಲಕ ಹೋಗಬೇಕು. ಆದರೆ ಶಿರಾಡಿಘಾಟ್ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಸುಮಾರು ನಾಲ್ಕು ತಿಂಗಳುಕಾಲ ಶಿರಾಡಿಘಾಟ್ ಬಂದ್ ಮಾಡಬೇಕಾಗುತ್ತದೆ. ಇದನ್ನೂ ಓದಿ: ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

ಒಂದು ವೇಳೆ ಶಿರಾಡಿಘಾಟ್ ಬಂದ್ ಆದರೆ ಬದಲಿ ಮಾರ್ಗದ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ, ಮಂಗಳೂರು ಜಿಲ್ಲಾಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು ಈ ಹಿಂದೆಯೂ ಚರ್ಚೆ ನಡೆಸಿದ್ದರು. ಆ ವೇಳೆ ಸ್ಥಳೀಯರು ಶಿರಾಡಿಘಾಟ್ ರಸ್ತೆ ಬಂದ್‍ಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಹೀಗಾಗಿ ಶಿರಾಡಿಘಾಟ್ ರಸ್ತೆ ಬಂದ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರ ಮೋಜು-ಮಸ್ತಿ- ಸೂಕ್ತ ಕ್ರಮಕ್ಕೆ ಮನವಿ

ಹಾಸನದಿಂದ ಸಕಲೇಶಪುರದವರೆಗಿನ ಹೆದ್ದಾರಿ ಕಾಮಗಾರಿ ಕಳೆದ 6 ವರ್ಷದಿಂದ ಕುಂಟುತ್ತ ಸಾಗುತ್ತಿದ್ದು, ಇನ್ನೂ ಕೂಡ ಪೂರ್ತಿಯಾಗಿಲ್ಲ. ಅದೇ ರೀತಿ ಶಿರಾಡಿಘಾಟ್ ರಸ್ತೆ ಕಾಮಗಾರಿ ಕೂಡ ವಿಳಂಭವಾದರೆ, ಪ್ರತಿನಿತ್ಯ ಸಂಚರಿಸುವ ಸ್ಥಳೀಯರಿಗೆ ತೊಂದರೆಯಾಗುತ್ತೆ ಎಂದು ಶಿರಾಡಿ ರಸ್ತೆ ಬಂದ್‍ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಶಿರಾಡಿಘಾಟ್ ರಸ್ತೆ ಬಂದ್ ಮಾಡುತ್ತಿದ್ದರೆ. ಅಷ್ಟೇ ಅಲ್ಲದೆ ಸಕಲೇಶಪುರ ಹೆಚ್ಚು ಮಳೆಯಾಗುವ ಭಾಗವಾಗಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ್ರೆ ಹೇಗೆ ಕೆಲಸ ಮಾಡುತ್ತಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.

Live Tv

Comments

Leave a Reply

Your email address will not be published. Required fields are marked *