RBI ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌‌ನ (RBI) ನೂತನ ಉಪಗವರ್ನರ್ (Deputy Governer) ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು (Shirish Chandra Murmu) ಅವರನ್ನು ನೇಮಕ ಮಾಡಲಾಗಿದೆ.

ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ಬಳಿಕ ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಇದನ್ನೂ ಓದಿ: 7 ವರ್ಷದ ಬಾಲಕನ ಮೇಲೆ ಶಿಕ್ಷಕಿಯಿಂದ ಇದೆಂಥಾ ಕ್ರೌರ್ಯ – ಹೋಂ ವರ್ಕ್‌ ಮಾಡದಿದ್ದಕ್ಕೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ

ಆರ್‌ಬಿಐ ನಾಲ್ಕು ಉಪಗವರ್ನರ್‌ಗಳನ್ನು ಹೊಂದಿದ್ದು, ಪ್ರತಿಯೊಬ್ಬರೂ ಹಣಕಾಸು ನೀತಿ, ಬ್ಯಾಂಕಿಂಗ್ ಮೇಲ್ವಿಚಾರಣೆ ಮತ್ತು ಹಣಕಾಸು ಮಾರುಕಟ್ಟೆಗಳ ನಿಯಂತ್ರಣದಂತಹ ನಿರ್ಣಾಯಕ ಕ್ಷೇತ್ರಗಳ ಬಗ್ಗೆ ಕಾರ್ಯನಿರ್ವಹಿಸುತ್ತಾರೆ. ಈ ಪೈಕಿ ಶಿರೀಶ್ ಚಂದ್ರ ಮುರ್ಮು ಅವರು ಒಂದು ಅಥವಾ ಹೆಚ್ಚಿನ ಖಾತೆಗಳ ಉಸ್ತುವಾರಿ ವಹಿಸಿಕೊಳ್ಳುವ ನಿರೀಕ್ಷೆಯಿದ್ದು, ಈವರೆಗೂ ಖಾತೆಗಳ ಉಸ್ತುವಾರಿ ಬಗ್ಗೆ ನಿಖರವಾದ ಮಾಹಿತಿ ಅಧಿಕೃತವಾಗಿ ಘೋಷಣೆಯಾಗಿಲ್ಲ. ಈ ಕುರಿತು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದ್ದು, ಆರ್‌ಬಿಐ ಉಪಗವರ್ನರ್ ಆಗಿ ನೇಮಿಸಲಾಗಿದೆ.