ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕದ ಖಾಸಗಿ ವಾಹನ ಮತ್ತು ಅಂಗಡಿಗಳ ಮೇಲೆ ಶಿವಸೇನೆ ಪುಂಡರ ದಾಳಿ ನಡೆಸಿದ ಘಟನೆ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮೀರಜ ಪಟ್ಟಣದಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಮಾಡಿರುವ ಆರೋಪವಾಗಿ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಶಿವಸೇನೆ ಪುಂಡರು ಈ ಕೃತ್ಯವನ್ನು ನಡೆಸುತ್ತಿದ್ದಾರೆ.

ಮಹಾರಾಷ್ಟçಕ್ಕೆ ಬರುವ ಕರ್ನಾಟಕದ ನಂಬರ್ ಪ್ಲೇಟ್ ಇರುವ ವಾಹನಗಳನ್ನು ತಡೆದು ಅವುಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ಪೊಲೀಸರ ಎದುರೇ ಕನ್ನಡಿಗರ ವಾಹನವನ್ನು ತಡೆದು ಶಿವಸೇನೆ ಪುಂಡರು ದೌರ್ಜನ್ಯ ನಡೆಸಿದ್ದಾರೆ. ಇದನ್ನೂಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯಲ್ಲಿ 5 ಜನರಿಗೆ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

 

Comments

Leave a Reply

Your email address will not be published. Required fields are marked *