ಜೈಲಿನಲ್ಲಿ ಶಿವಮೊಗ್ಗ ಹರ್ಷ ಕೊಲೆ ಕೇಸ್ ಆರೋಪಿಗಳ ಹುಚ್ಚಾಟ – ಬ್ಯಾರಕ್‍ನಲ್ಲಿ ಪುಂಡಾಟ

ಶಿವಮೊಗ್ಗ: ಹಿಂದೂ ಸಮಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳು ಸೆಂಟ್ರಲ್ ಜೈಲಿನಲ್ಲಿ ಪುಂಡಾಟಿಕೆ ಮಾಡಿದ್ದಾರೆ.

ಸೆಂಟ್ರಲ್ ಜೈಲಿನಲ್ಲಿದ್ರೂ ಬ್ಯಾರಕ್‍ನಲ್ಲಿ ಪುಂಡಾಟಿಕೆ ನಡೆಸುತ್ತಿರುವ ಆರೋಪಿಗಳು ಜೈಲಿನ ಭದ್ರತಾ ಸಿಬ್ಬಂದಿಗಳಿಗೇ ಅವಾಜ್ ಹಾಕತ್ತಿದ್ದಾರೆ. ಈ ಮೊದಲು ಬೆಂಗಳೂರು, ಧಾರವಾಡ, ಬೆಳಗಾವಿ ಮತ್ತು ತುಮಕೂರು ಜೈಲಿನಲ್ಲಿ ಆರೋಪಿಗಳನ್ನು ಇರಿಸಲಾಗಿತ್ತು ಆ ಬಳಿಕ ಇತ್ತೀಚೆಗಷ್ಟೇ ಹತ್ತು ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಹತ್ತು ಮಂದಿ ಆರೋಪಿಗಳು ಒಂದೇ ಬ್ಯಾರಕ್‍ನಲ್ಲಿದ್ದು, ಕ್ವಾರಂಟೈನ್ ಸೆಲ್‍ನಿಂದ ಸೆಂಟ್ರಲ್ ಜೈಲಿನ ಒಳಗೆ ಕಳುಹಿಸುವಂತೆ ಆರೋಪಿಗಳು ಜೈಲಾಧಿಕಾರಿಗಳಿಗೆ ಅವಾಜ್ ಹಾಕುತ್ತಿರುವ ಬಗ್ಗೆ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹರ್ಷ ಕೊಲೆಯ ಪ್ರತೀಕಾರಕ್ಕೆ ನಡೆಯಿತಾ ಸಂಚು – ಪೊಲೀಸ್ ಕಾರ್ಯಾಚರಣೆಯಿಂದ ಸಂಚು ವಿಫಲ

jail

ಜೈಲಿನ ನಿಯಮಾವಳಿಯಂತೆ 14 ದಿನ ಕ್ವಾರಂಟೈನ್ ಕಡ್ಡಾಯಕ್ಕೆ ಆರೋಪಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ನಮಗೇನು ಕೊರೊನಾ ಇದೆಯಾ? ಒಳಗೆ ಕಳುಹಿಸಿ ಎಂದು ಜೈಲಾಧಿಕಾರಿಗಳನ್ನು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಜೈಲಿನಲ್ಲಿರುವ ಟೈಲ್ಸ್ ಕಲ್ಲನ್ನು ಒಡೆದು ಕಲ್ಲಿನ ಚೂರ್‌ನಿಂದ ಕೈ ಕೊಯ್ದುಕೊಂಡು ಹುಚ್ಚಾಟ ನಡೆಸುತ್ತಿದ್ದಾರೆ. ಆರು ಮಂದಿ ಆರೋಪಿಗಳು ಪರಸ್ಪರ ತಮ್ಮಷ್ಟಕ್ಕೆ ಟೈಲ್ಸ್ ಚೂರ್‌ನಿಂದ ಮೈ, ಕೈ ರಕ್ತ ಬರುವಂತೆ ಕೊಯ್ದುಕೊಂಡು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಲು ಹರ್ಷನ ಹತ್ಯೆ- ಎನ್‌ಐಎ ವರದಿಯಲ್ಲಿ ಸ್ಫೋಟಕ ಮಾಹಿತಿ

ಪ್ರಮುಖ ಆರೋಪಿ ಮಹಮ್ಮದ್ ಖಾಸಿಫ್, ಅಬ್ದುಲ್ ರೋಷನ್ ಸೇರಿ ಆರು ಮಂದಿ ಆರೋಪಿಗಳು ಮೈ, ಕೈ ಕೊಯ್ದುಕೊಂಡು ಹುಚ್ಚಾಟ ನಡೆಸುತ್ತಿದ್ದಂತೆ ಕೂಡಲೇ ಜೈಲಿನ ಆಸ್ಪತ್ರೆ ಸಿಬ್ಬಂದಿಯಿಂದ ಆರು ಮಂದಿ ಆರೋಪಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಜೈಲಿನ ಒಳಗೆ ಬ್ಯಾರಕ್‍ಗೆ ಶಿಫ್ಟ್ ಮಾಡಲಾಗಿದ್ದು, ಉಳಿದವರನ್ನು ಪ್ರತ್ಯೇಕವಾಗಿ ಬೇರೆ ಬೇರೆ ಕ್ವಾರಂಟೈನ್ ಸೆಲ್‍ಗೆ ಶಿಫ್ಟ್ ಮಾಡಲಾಗಿದೆ.

ಈ ಘಟನೆ ಬಳಿಕ ಜೈಲಾಧಿಕಾರಿಗಳು ಕೂಡಲೇ ಪರಪ್ಪನ ಅಗ್ರಹಾರ ಪೊಲೀಸ್ ಸ್ಟೇಷನ್‍ಗೆ ಪ್ರಾಥಮಿಕ ರಿಪೋರ್ಟ್ ನೀಡಿದ್ದಾರೆ. ಹರ್ಷ ಕೊಲೆ ಕೇಸ್ ಆರೋಪಿಗಳದ್ದೇ ಇದೀಗ ಜೈಲಾಧಿಕಾರಿಗಳಿಗೆ ತಲೆನೋವಾಗಿದ್ದು, ಸದ್ಯ ಎನ್‍ಐಎ ಟೀಂ ತನಿಖೆ ನಡೆಸ್ತಿದೆ. ಆರೋಪಿಗಳನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಘಟನೆ ಬಳಿಕ ಆರೋಪಿಗಳ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗಿದ್ದು ಯಾವುದೇ ವಸ್ತು ಸಿಗದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಕಾರಾಗೃಹ ಇಲಾಖೆಗೂ ಆರೋಪಿಗಳ ನಡವಳಿಕೆ ಮತ್ತು ಘಟನೆ ಬಗ್ಗೆ ಮಾಹಿತಿ ರವಾನೆಯಾಗಿದೆ.

Comments

Leave a Reply

Your email address will not be published. Required fields are marked *