ಶಿವಣ್ಣ-ರಾಮ್ ಚರಣ್ ಕಾಂಬಿನೇಷನ್ ಚಿತ್ರಕ್ಕೆ ಮಾ.20ಕ್ಕೆ ಮುಹೂರ್ತ

ಟ ಶಿವರಾಜ್ ಕುಮಾರ್ (Shivaraj Kumar) ಮತ್ತು ತೆಲುಗಿನ ಹೆಸರಾಂತ ನಟ ರಾಮ್ ಚರಣ್ (Ram Charan) ಕಾಂಬಿನೇಷನ್ ನ ಚಿತ್ರವೊಂದು ಮೂಡಿ ಬರಲಿದೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿಯೇ ಈ ಕಾಂಬಿನೇಷನ್ ಚಿತ್ರಕ್ಕೆ ಇದೇ ಮಾರ್ಚ್ 20ಕ್ಕೆ ಮುಹೂರ್ತ ನಡೆಯಲಿದ್ದು, ಈ ಚಿತ್ರಕ್ಕೆ ಪೆದ್ದಿ ಎಂದು ಹೆಸರಿಡಲಾಗಿದೆಯಂತೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ. ಇದು ಸಿನಿಮಾದ ಕಾನ್ಸೆಕ್ಟ್ ಕೂಡ ಆಗಿರಲಿದೆಯಂತೆ.

ಈ ಸಿನಿಮಾದ ಕುರಿತಂತೆ ಹಲವಾರು ವಿಚಾರಗಳು ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಗಿರಕಿ ಹೊಡೆಯುತ್ತಿವೆ. ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಜೈಲರ್ ಒಪ್ಪಿಕೊಳ್ಳುವಾಗಲೇ ಧನುಷ್ (Dhanush) ನಟನೆಯ ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೂ ಸಹಿ ಮಾಡಿದ್ದರು ಶಿವರಾಜ್ ಕುಮಾರ್. ನಂತರ ರಾಮ್ ಚರಣ್ ಅವರ ಸಿನಿಮಾದಲ್ಲೂ ನಟಿಸಲು ಮನಸ್ಸು ಮಾಡಿದ್ದರಂತೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ ಎನ್ನುವುದು ಹಲವರ ಲೆಕ್ಕಾಚಾರ.

 

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ಈ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ.