ಆಶಾ ಭೋಸ್ಲೆ ಕುಟುಂಬಕ್ಕೆ ಮತ್ತೊಂದು ಆಘಾತ

ತಾ ಮಂಗೆಶ್ಕರ್ ಅವರ ನಿಧನದಿಂದ ಇನ್ನೂ ಆಚೆ ಬಾರದ ಸಹೋದರಿ ಆಶಾ ಭೋಸ್ಲೆಗೆ ಮತ್ತೊಂದು ಆಘಾತ ಉಂಟಾಗಿದೆ. ದಂತಕಥೆ ಗಾಯಕಿಯ ಆಶಾ ಅವರ ಪುತ್ರ ಆನಂದ್ ಭೋಸ್ಲೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿದ್ದ ಆನಂದ್ ಏಕಾಏಕಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಅವರನ್ನು ಕೂಡಲೇ ಅವರನ್ನು ದುಬೈನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಏಕಾಏಕಿ ನೆಲದ ಮೇಲೆ ಬಿದ್ದ ಪರಿಣಾಮದಿಂದಾಗಿ ಅವರಿಗೆ ಕೆಲವು ಗಾಯಗಳಾಗಿವೆ. ಈ ವಿಷಯ ತಿಳಿಯುತ್ತಿದಂತೆ ಕುಟುಂಬಸ್ಥರು ಮತ್ತು ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

ಕೆಲವು ದಿನಗಳ ಹಿಂದೆಯಷ್ಟೇ ಈ ಘಟನೆ ನಡೆದಿದ್ದು, ಆನಂದ್ ಭೋಸ್ಲೆ ಅವರನ್ನು ಮೊದಲು ಐಸಿಯುಗೆ ದಾಖಲಿಸಲಾಗಿತ್ತು. ಈಗವರು ಚೇತರಿಸಿಕೊಂಡಿದ್ದು, ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಗಾಗಲೇ ಲತಾ ಅವರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಕ್ಕೆ ಈ ಘಟನೆಯು ತೀವ್ರ ಆತಂಕ ಸೃಷ್ಟಿ ಮಾಡಿತ್ತು. ಇನ್ನೂ ಆಸ್ಪತ್ರೆಯಲ್ಲಿ ಆನಂದ್ ಚಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿತಿ ವಿಚಾರಿಸಲು ಪ್ರತಿದಿನವೂ ಆಶಾ ಭೋಸ್ಲೆಗೆ ಕರೆ ಮಾಡುತ್ತಿದ್ದಾರೆ.

ಆಶಾ ಭೋಂಸ್ಲೆ ಅವರು ತಮ್ಮ ಮಗ ಕೆಳಗೆ ಬಿದ್ದು ಆಸ್ಪತ್ರೆಗೆ ಸೇರಿದಾಗ ದುಬೈನಲ್ಲಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಅವರು ಶೀಘ್ರದಲ್ಲೇ ಮುಂಬೈಗೆ ಹಿಂತಿರುಗುವುದಿಲ್ಲವಂತೆ. ಆನಂದ್ ಚೇತರಿಸಿಕೊಳ್ಳುತ್ತಿದ್ದು, ಮನೆಗೆ ಯಾವತ್ತು ತೆರಳಲಿದ್ದಾರೆ ಎನ್ನುವ ಮಾಹಿತಿ ಸದ್ಯಕ್ಕಿಲ್ಲ.

ಈ ವರ್ಷದ ಆರಂಭದಲ್ಲಿ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರ ಹಠಾತ್ ನಿಧನದಿಂದಾಗಿ ಇಡೀ ರಾಷ್ಟ್ರಕ್ಕೆ ಮತ್ತು ಮಂಗೇಶ್ಕರ್ ಕುಟುಂಬಕ್ಕೆ ದೊಡ್ಡ ಆಘಾತವಾಗಿತ್ತು.

Comments

Leave a Reply

Your email address will not be published. Required fields are marked *