ನಮ್ಮ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನಿಸಬೇಡಿ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ ಎಂದು ಸಿದ್ದರಾಮಯ್ಯ ಟ್ಟಿಟ್ಟರ್ ಮೂಲಕ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ. ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ. ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯೋ ಇಲ್ಲವೋ ನಮಗೆ ಗೊತ್ತಿಲ್ಲ, ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನಮ್ಮ ಪಕ್ಷದ ನಾಯಕರು ಹೇಳುತ್ತಿರುವುದು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ – ತನಿಖೆಗೆ ಇಡಿ, ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದ ಸರ್ಕಾರ

ತನಿಖೆ ನಡೆಸಲು ಹಿಂಜರಿಕೆ ಯಾಕೆ?:
ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಯುತ್ತಿದೆ. ಬಸವರಾಜ ಬೊಮ್ಮಾಯಿ ಈಗಿನ ಮುಖ್ಯಮಂತ್ರಿಗಳು ಮಾತ್ರ ಅಲ್ಲ ಹಿಂದಿನ ಗೃಹಮಂತ್ರಿಗಳು ಹೌದು. ಈ ಹಂತದಲ್ಲಿ ಆರೋಪವನ್ನು ನಿರ್ಲಕ್ಷಿಸಿ ಎಂದರೆ ತನಿಖೆಯನ್ನು ಕೈಬಿಡಿ ಎಂದಾಗುವುದಿಲ್ಲವೇ? ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ನೀವು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?. ಇದನ್ನೂ ಓದಿ: ಎಥೆನಾಲ್ ಉತ್ಪಾದನೆಗೆ ಮುಂದಾದ ಕೇಂದ್ರ ಸರ್ಕಾರ

Comments

Leave a Reply

Your email address will not be published. Required fields are marked *