ಸೌಹಾರ್ದತೆ ಕೆಡಿಸುವ ಕೆಲಸ ಬಿಜೆಪಿಗೆ ತಿರುಗುಬಾಣ ಆಗುತ್ತೆ: ಸಿದ್ದರಾಮಯ್ಯ

SIDDARAMAIAH

ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲ ಕಡೆ ಧ್ವನಿವರ್ಧಕಗಳನ್ನು ಹಾಕುತ್ತಾರೆ. ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಧ್ವನಿವರ್ಧಕ ನಿಷೇಧ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಕೆಲವು ವಿಷಯಗಳು ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು. ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ. ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ನಸುಕಿನಲ್ಲಿ ಸುಪ್ರಭಾತ, ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ, ಇಂದಿನದಲ್ಲ: ಕುಮಾರಸ್ವಾಮಿ

ಈ ಎಲ್ಲ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಈ ವೇಳೆ ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ. ಅವರೇ ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಸಿಎಂ ಬೊಮ್ಮಾಯಿ ಅವರಿಗೆ ಎಚ್ಚರಿಕೆ ನೀಡಿದರು.

RSS ಮತ್ತು ಭಜರಂಗದಳ ಸರ್ಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು. ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ – ಮೂವರು ಆಸ್ಪತ್ರೆಗೆ ದಾಖಲು 

Comments

Leave a Reply

Your email address will not be published. Required fields are marked *