ಕೋಲಾರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಐದು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಬೇಕೆಂದರೆ ಸಿದ್ದರಾಮಯ್ಯ ಆಶೀರ್ವಾದ ಇರಬೇಕು. ಸಿದ್ದರಾಮಯ್ಯ ಅವರು ಒಮ್ಮೆ ಗುಟುರು ಹಾಕಿದರೆ ಸರ್ಕಾರ ಇರುವುದಿಲ್ಲ ಎಂದು ಜಿಲ್ಲೆಯ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದ್ದಾರೆ.
ಮಾಲೂರಿನಲ್ಲಿ ನಡೆದ ಕನಕದಾಸ ಹಿಂದುಳಿದ ವರ್ಗಗಳ ಹಾಸ್ಟೆಲ್ ಉದ್ಘಾಟನೆಗೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಸಿದ್ದರಾಮ್ಯಯ ಅವರ ಕೈಯಲ್ಲಿ ರಾಜ್ಯ ಸರ್ಕಾರ ಇದೆ. ಯಾವೊಬ್ಬ ಶಾಸಕರೂ ಕೂಡಾ ಸೇಲ್‍ಗಿಲ್ಲ. ಸರ್ಕಾರ ಬಿದ್ದು ಹೋಗುತ್ತದ್ದೆ ಎಂಬ ಯಾವುದೇ ಯೋಚನೆ ಬೇಡ. ಸಿದ್ದರಾಮಯ್ಯ ಅವರ ಬೆಂಬಲ ಇರುವವರೆಗೂ ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ. ಒಂದೊಮ್ಮೆ ಸಿದ್ದರಾಮಯ್ಯ ಅವರು ಏಯ್ ಎಂದರೆ ಸಾಕು ನಾವು ಸರ್ಕಾರದಲ್ಲಿ ಇರುವುದಿಲ್ಲ. ಸಮಿಶ್ರ ಸರ್ಕಾರದಲ್ಲೂ ಸಿದ್ದರಾಮಯ್ಯ ಅವರೇ ಪವರ್‍ಫುಲ್ ಎಂದು ಹೇಳಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತೆ. ಸರ್ಕಾರ ಅಸ್ಥಿರಗೊಳಿಸುವಲ್ಲಿ ನನ್ನ ಪಾತ್ರ ಇಲ್ಲ, ನನ್ನ ಆಪ್ತರ ವಲಯದಲ್ಲೂ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸಿಎಂ ಕುಮಾರಸ್ವಾಮಿ ದಂಗೆ ವಿಚಾರವಾಗಿ ನೀಡಿದ ಹೇಳಿಕೆಗೆ ಸಂಬಂದಪಟ್ಟಂತೆ ರಾಜ್ಯಪಾಲರಿಗೆ ದೂರು ನೀಡಿರುವುದು ರಾಜಕೀಯ ಅಷ್ಟೇ ಅದರಲ್ಲಿ ಬೇರೆ ಉದ್ದೇಶ ಇಲ್ಲಾ. ಕೇಂದ್ರ ಸರ್ಕಾರವಾಗಲೀ ರಾಜ್ಯ ಸರ್ಕಾರವಾಗಲೀ ಯಾವುದೇ ಸರ್ಕಾರವಿದ್ದರು ಜನರಿಂದ ಆಯ್ಕೆಯಾಗಿರುವ ಸರ್ಕಾರಗಳು ಕಾನೂನು ಬಿಟ್ಟು ಏನುಮಾಡಲು ಸಾಧ್ಯವಿಲ್ಲ. 25 ರಂದು ಕಾಂಗ್ರೆಸ್ ಶಾಸಕಾಂಗ ಸಭೆಯನ್ನ ಖಾಸಗಿ ಹೋಟೆಲ್‍ನಲ್ಲಿ ಕರೆಯಲಾಗಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲಾ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜೊತೆಗೆ ಅರಣ್ಯ ಸಚಿವ ಶಂಕರ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಕೆಜಿಎಫ್ ಶಾಸಕಿ ರೂಪ ಶಶಿಧರ್ ಭಾವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply