ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕೊನೆಗೂ ಚಾಲನೆ – ಆ್ಯಪ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ನೋಂದಣಿಗೆ ರಾಜ್ಯ ಸರ್ಕಾರ ಕಡೆಗೂ ಚಾಲನೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಬುಧವಾರ ಗೃಹಲಕ್ಷ್ಮಿ ಆ್ಯಪ್ ಬಿಡುಗಡೆ ಮಾಡಿದ್ದಾರೆ.

ಗುರುವಾರದಿಂದ ಅಧಿಕೃತವಾಗಿ ಅರ್ಜಿ ಸ್ವೀಕಾರ ಆರಂಭ ಆಗಲಿದೆ. ಇದಕ್ಕಾಗಿ ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂಬುದು ಮೊಬೈಲ್‌ಗಳಿಗೆ ಸಂದೇಶ ಬರಲಿದೆ. ಆಗ ನಿಗದಿತ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬೇಕು. ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.

ಆದರೆ ಆ್ಯಪ್‌ಗಳಿಂದಾಗಿ ಅನಕ್ಷರಸ್ತರಿಗೆ ತೊಂದರೆಯಾಗುವ ಬಗ್ಗೆ ‘ಪಬ್ಲಿಕ್ ಟಿವಿ’ಯಲ್ಲಿ ಪ್ರಸ್ತಾಪವಾಗಿತ್ತು. ಇದನ್ನು ಸರ್ಕಾರ ಪರಿಗಣಿಸಿದೆ. ಮೊಬೈಲ್ ಬಳಕೆ ಯಾರಿಗೆ ಬರುವುದಿಲ್ಲವೋ ಅಂಥವರ ನೋಂದಣಿಗೆ ಅಂಗನವಾಡಿ ಕಾರ್ಯಕರ್ತೆಯರು ನೆರವಾಗಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಇದನ್ನೂ ಓದಿ: ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು

ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖದ್ದಾಗಿದೆ. ಕುಟುಂಬದ ಮನೆ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ನೀಡುವುದು ಯೋಜನೆಯ ಉದ್ದೇಶವಾಗಿದೆ. ಯಜಮಾನಿಯಾಗಲಿ ಅಥವಾ ಆಕೆ ಪತಿಯಾಗಲಿ ತೆರಿಗೆ ಪಾವತಿದಾರರಾಗಿದ್ದಲ್ಲಿ, ಅವರಿಗೆ ಈ ಯೋಜನೆ ಸೌಲಭ್ಯ ಸಿಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತಳ್ಳಾಟ ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ – ಆಸ್ಪತ್ರೆಗೆ ರವಾನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]