ಗಾದೆ ಮಾತು ಹೇಳಿ ರೆಡ್ಡಿ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ

ಚಿಕ್ಕಮಗಳೂರು: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಾರ್ದನ ರೆಡ್ಡಿ ಅವರ ನ್ಯಾಯಾಂಗ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರು ಶಿಕ್ಷೆಯಾಗಲೇಬೇಕು. ನ್ಯಾಯಾಲಯ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಿಜೆಪಿ ವರ್ಚಸ್ಸನ್ನು ಕಡಿಮೆ ಮಾಡಲು ಕಾಂಗ್ರೆಸ್ ತಂತ್ರ ಹೆಣೆದಿದೆ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿ ಅವರು ಬಿಜೆಪಿಯಲ್ಲೇ ಇಲ್ಲ. ಏಕೆಂದರೆ ರೆಡ್ಡಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ಮಾತು ರೆಡ್ಡಿ ಅವರಿಗೆ ಏಕೆ ಎಂದು ಲೇವಡಿ ಮಾಡಿದರು.

ಅಂಬಿಡೆಂಟ್ ಡೀಲ್ ಪ್ರಕಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದ ನೀಡಿದೆ. ಇದರಂತೆ ಜನಾರ್ದನ ರೆಡ್ಡಿ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *