ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನ ಕೇಸನ್ನೇ ಮುಚ್ಚಿ ಹಾಕಿದ್ದರು: ಸಿಎಂ

ಕಾರವಾರ: ಬಾಂಬ್ ಸ್ಫೋಟ ಪ್ರಕರಣದಲ್ಲಿ ಐವರ ಬಂಧನವಾಗಿದೆ. ಯಾರು ಏನೆಂದು ನನಗೆ ತಿಳಿದಿಲ್ಲ. ಪ್ರಕರಣದ ಬಗ್ಗೆ ತನಿಖೆ ಚುರುಕುಗೊಂಡಿದೆ. ಅಲ್ಲದೇ ಪಾಕಿಸ್ತಾನ್ ಜಿಂದಾಬಾದ್ ಎಂದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಶಿರಸಿ (Sirsi) ತಾಲೂಕಿನ ಬನವಾಸಿಯ ಕದಂಬೋತ್ಸವ (Kadambotsava) ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಬಿಜೆಪಿ (BJP) ಕಾಲದಲ್ಲಿ ಮಂಡ್ಯದಲ್ಲಿ ಅವರ ಕಾರ್ಯಕರ್ತ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದ. ಅವರನ್ನು ಏಕೆ ಬಂಧಿಸಿರಲಿಲ್ಲ? ಆ ಕೇಸನ್ನೇ ಬಿಜೆಪಿಗರು ಮುಚ್ಚಿ ಹಾಕಿದ್ದರು. ನಾವು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ಪರ ಘೋಷಣೆ; ವಿತಂಡವಾದಿ ಕಾಂಗ್ರೆಸಿಗರಿಗೆ ತೀವ್ರ ಮುಖಭಂಗ: ಅಶ್ವಥ‌ ನಾರಾಯಣ್

ಬಾಂಬ್ ಸ್ಫೋಟಿಸುವ ಬೆದರಿಕೆ ನಮಗೆ ಬಂದಿಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬಂದರೆ ಹೆಬ್ಬಾರ್‍ಗೆ ಸ್ವಾಗತವಿದೆ. ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನ್ನ ಬಳಿ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ ಅವರು, ನಾಲ್ಕು ವರ್ಷದಿಂದ ಅನಂತ್ ಕುಮಾರ್ ಎಲ್ಲಿಗೆ ಹೋಗಿದ್ದರು? ಅಂತವರನ್ನು ನಿವೇ ಆಯ್ಕೆ ಮಾಡಿದ್ದೀರಿ. ಅನಂತ್ ಕುಮಾರ್ ಅಭಿವೃದ್ಧಿ ಕೆಲಸ, ಜನರ ಕೆಲಸ ಮಾಡದ ವ್ಯಕ್ತಿ ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಮೈ ಮರೆತ್ರೆ ವಿಧಾನಸೌಧದ ಗೋಪುರ ಗುಂಬಜ್ ಆಗುತ್ತೆ: ಪ್ರತಾಪ್ ಸಿಂಹ