ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇನೆ: ಸಿದ್ದರಾಮಯ್ಯ

ಮೈಸೂರು: ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇವೆ ಎಂದು ಬಿಟ್ ಕಾಯಿನ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಸದ್ದು ಮಾಡ್ತಿರೋ ಬಿಟ್ ಕಾಯಿನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ಆಡಳಿತ, ವಿರೋಧ ಪಕ್ಷದವರು ಯಾರೆ ಇರಲಿ. ನೀವೂ ಮೊದಲು ತನಿಖೆ ಆರಂಭಿಸಿ. ಚುರುಕಾಗಿ ಏಕೆ ತನಿಖೆ ಆರಂಭಿಸುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಈ ವಿಚಾರದಲ್ಲಿ ನನ್ನ ಬಳಿಯೇ ಸರ್ಕಾರ ಸಾಕ್ಷಿ ಕೇಳುತ್ತಿದೆ. ಅದರ ಸಾಕ್ಷಿ ಹುಡುಕಬೇಕಾದವರು, ತನಿಖೆ ಮಾಡಬೇಕಾದವರು ತನಿಖಾಧಿಕಾರಿಗಳು. ಆ ಕೆಲಸವನ್ನು ಸರ್ಕಾರ ಮಾಡಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಕಿಂಗ್ ಮುಗಿಸಿ ಮನೆಗೆ ಬಂದ DYSP ಹೃದಯಾಘಾತದಿಂದ ಸಾವು

ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಇನ್ನು ಸಾಕ್ಷಿಗಳು ಬೇಕಿವೆ. ನಾನು ಸಾಕ್ಷಿಗಳ ಸಂಗ್ರಹದಲ್ಲಿ ಇದ್ದೇನೆ. ನಾನು ನನ್ನ ಬಳಿ ಇರುವ ವಿಚಾರವನ್ನ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ ಎಂದಿದ್ದಾರೆ.

ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಭಾಗಿಯಾಗುವ ವಿಚಾರದಲ್ಲಿ ಬಗ್ಗೆ ಮಾತನಾಡಿದ ಅವರು, ನಾವು ಏಕೆ ಒಂದೇ ವೇದಿಕೆಯಲ್ಲಿ ಬರಬಾರದಾ? ಅವರು ಕಾಂಗ್ರೆಸ್ ಸೇರುತ್ತಾರಾ, ಬಿಡುತ್ತಾರಾ ಅದು ಬೇರೆ ವಿಚಾರ. ಗುಬ್ಬಿ ಶಾಸಕ ಶ್ರೀನಿವಾಸ್ ಅವರಿಗೆ ಅನೌಪಚಾರಿಕವಾಗಿ ಪಕ್ಷಕ್ಕೆ ಆಹ್ವಾನಿಸಿದ್ದೆ. ಅದನ್ನು ಇದಕ್ಕೆ ಹೋಲಿಸಬೇಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಸಾವಿನಿಂದ ಲೋಕ ಕಾಣುವ ಕನಸು ಮರೆತ ಅಂಧ ಸಹೋದರಿಯರು

Comments

Leave a Reply

Your email address will not be published. Required fields are marked *