ತಮ್ಮ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತಮ್ಮೆಲ್ಲ ಎಲ್ಲ ಶಾಸಕರಿಗೆ ಮೇ 23ರಿಂದ 1 ವಾರ ಯಾರೂ ರಾಜ್ಯ ಬಿಟ್ಟು ಹೋಗುವಂತಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 23ರ ಬಳಿಕ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹಾಗಾಗಿ ಎಲ್ಲ ಶಾಸಕರು ರಾಜ್ಯದಿಂದ ಹೊರ ಹೋಗದಂತೆ ಎರಡು ಪಕ್ಷದ ನಾಯಕರು ಸೂಚಿಸಿದ್ದಾರೆ. ಒಂದು ವೇಳೆ ಹೊರ ರಾಜ್ಯ ಅಥವಾ ವಿದೇಶ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರೂ ಮೇ 23ರೊಳಗೆ ಹಿಂದಿರುಗಬೇಕೆಂಬ ಖಡಕ್ ಸಂದೇಶವನ್ನು ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಎರಡೂ ಪಕ್ಷಗಳು ಶಾಸಕಾಂಗ ಸಭೆ ನಡೆಸುವ ಸಾಧ್ಯತೆಗಳು ಹೆಚ್ಚಾಗಿದ್ದರಿಂದ ಶಾಸಕರಿಗೆ ಈ ಸಂದೇಶ ರವಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಫಲಿತಾಂಶ ಬಂದ ಒಂದು ವಾರ ಎಲ್ಲ ಕೈ ಶಾಸಕರು ಬೆಂಗಳೂರಿನಲ್ಲಿಯೇ ಇರತಕ್ಕದ್ದು ಎಂದು ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *