ಸಿಂದಗಿ, ಹಾನಗಲ್ ಉಪ ಚುಣಾವಣೆ- ಇಂದು ಹೈಕಮಾಂಡ್ ಕೈ ಸೇರಲಿದೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಇಂದು ಹೈಕಮಾಂಡ್‍ಗೆ ಕಳುಹಿಸಲಿದೆ. ಇಂದು ನಡೆಯುವ ಬಿಜೆಪಿ ಕೋರ್ ಕಮಿಟಿ ಸಹ ನಡೆಯಲಿದೆ.

ಹಾನಗಲ್‍ನಲ್ಲಿ ಸಂಸದ ಶಿವಕುಮಾರ್ ಉದಾಸಿಯವರ ಪತ್ನಿ ರೇವತಿ ಉದಾಸಿ ಬಿಜೆಪಿ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಉದಾಸಿ ತಂದೆ ಸಿ.ಎಂ.ಉದಾಸಿ ನಿಧನದಿಂದ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಜೊತೆಗೆ ಮಾಜಿ ಎಂಎಲ್‍ಸಿಗಳಾದ ಶಿವರಾಜ್ ಸಜ್ಜನರ್, ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಭೋಜರಾಜ ಕರೂದಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಇಳಿಗೇರ್, ಸಿ.ಆರ್.ಬಳ್ಳಾರಿ ಸಹ ಬಿಜೆಪಿ ಟಿಕೆಟ್‍ಗಾಗಿ ಸ್ಪರ್ಧೆಯಲ್ಲಿದ್ದಾರೆ. ಇದನ್ನೂ ಓದಿ: ಅಡುಗೆ ಎಣ್ಣೆ ಇನ್ನಷ್ಟು ದುಬಾರಿ

ಪತ್ನಿಗೆ ಟಿಕೆಟ್ ಕೊಡಿಸುವ ಸಲುವಾಗಿ ಮೂರು ದಿನಗಳಿಂದ ಶಿವಕುಮಾರ್ ಉದಾಸಿ ಬೆಂಗಳೂರಲ್ಲೇ ಬೀಡು ಬಿಟ್ಟಿದ್ದು, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇಲೆ ಇನ್ನಿಲ್ಲದ ಒತ್ತಡ ಹಾಕುತ್ತಿದ್ದಾರೆ. ಒಂದು ವೇಳೆ ಬಿಜೆಪಿ ಅನುಕಂಪದ ಲೆಕ್ಕಾಚಾರ ಹಾಕಿದರೆ ಆಗ ಸಿ.ಎಂ.ಉದಾಸಿ ಸೊಸೆ ರೇವತಿ ಉದಾಸಿಯೇ ಅಭ್ಯರ್ಥಿ ಆಗಬಹುದು. ಇದನ್ನೂ ಓದಿ: ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ

ಇನ್ನು ಸಿಂದಗಿ ಚುನಾವಣಾ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೆಗಲಿಗೆ ಹಾಕುವ ಸಾಧ್ಯತೆ ಇದೆ. ಕ್ಷೇತ್ರದಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರ ಟಿಕೆಟ್‍ನ ಪ್ರಬಲ ಆಕಾಂಕ್ಷಿ ಆಗಿದ್ದು, ಬೆಂಗಳೂರಲ್ಲೇ ಇದ್ದು ಲಾಬಿ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಕೂಡಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

Comments

Leave a Reply

Your email address will not be published. Required fields are marked *