‘ಕೆಜಿಎಫ್‌ 2’ ಸಿಂಗರ್‌ ಜೊತೆ ಎಂಗೇಜ್‌ ಆದ ‘ಸಿಂಗಾರ ಸಿರಿಯೇ’ ಖ್ಯಾತಿಯ ಪ್ರಮೋದ್‌ ಮರವಂತೆ

‘ಕಾಂತಾರ’ ಸಿನಿಮಾದಲ್ಲಿನ ‘ಸಿಂಗಾರ ಸಿರಿಯೇ’ ಖ್ಯಾತಿಯ ಲಿರಿಕ್ಸ್ ರೈಟರ್ ಪ್ರಮೋದ್ ಮರವಂತೆ (Pramod Maravante) ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಕೆಜಿಎಫ್ 2’ ಚಿತ್ರದ ಸಿಂಗರ್ ಸುಚೇತ (Suchetha Basrur) ಜೊತೆ ಪ್ರಮೋದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲು

ನಿಶ್ಚಿತಾರ್ಥದ (Engagement) ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ‘ರಾಗಕ್ಕೆ ಪದ ಸೇರಿದೆ ಬದುಕೊಂದು ಹಾಡಾಗಿದೆ’ ಎಂದು ಸಾಲುಗಳನ್ನು ಬರೆದು ಭಾವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

ಪ್ರಮೋದ್ ಭಾವಿ ಪತ್ನಿಯ ಹೆಸರು ಸುಚೇತ ಬಸ್ರೂರು, ಕೆಜಿಎಫ್ 2 ಚಿತ್ರದಲ್ಲಿ ‘ಗಗನ ನೀ ಭುವನ ನೀ’ ಎಂಬ ಹಾಡನ್ನು ಸೊಗಸಾಗಿ ಹಾಡುವ ಮೂಲಕ ಸದ್ದು ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸೊಸೆಯಾಗಿದ್ದಾರೆ. ಅವರ ಅಕ್ಕನ ಮಗಳು ಸುಚೇತ ಜೊತೆ ಪ್ರಮೋದ್ ಉಂಗುರದ ಮುದ್ರೆ ಒತ್ತಿದ್ದಾರೆ. ಸದ್ಯದಲ್ಲೇ ಮದುವೆ ಕುರಿತು ಅಪ್‌ಡೇಟ್‌ ಹಂಚಿಕೊಳ್ಳಲಿದ್ದಾರೆ.

ಅಂದಹಾಗೆ, ಸಿಂಗಾರ ಸಿರಿಯೇ, ಚೆಂದ ಚೆಂದ ನನ್ನ ಹೆಂಡ್ತಿ, ಮತ್ತು ‘ಸೀತಾರಾಮ’ ಸೀರಿಯಲ್‌ನ ಟೈಟಲ್ ಟ್ರ್ಯಾಕ್‌ಗೆ ಪ್ರಮೋದ್ ಸಾಹಿತ್ಯ ಬರೆದಿದ್ದಾರೆ. ಸಾಕಷ್ಟು ಸಿನಿಮಾಗಳ ಹಾಡಿಗೆ ಲಿರಿಕ್ಸ್ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.